ಮುಳ್ಳಿಕಟ್ಟೆ ಸರ್ಕಲ್ ನಲ್ಲಿ ಪಿಕಪ್ ವಾಹನ ಪಲ್ಟಿ
ಕುಂದಾಪುರ:ಹಣ್ಣನ್ನು ತುಂಬಿಸಿಕೊಂಡು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬೈಂದೂರು ಕಡೆಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಪಿಕಪ್ ಗಾಡಿ ಮುಳ್ಳಿಕಟ್ಟೆ ಸರ್ಕಲ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ರಸ್ತೆ ಮಧ್ಯೆ ಪಲ್ಟಿಯಾಗಿ ಉರುಳಿ ಬಿದ್ದ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ.ಘಟನೆಯಲ್ಲಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಅವೈಜ್ಞಾನಿಕತೆ ಯಿಂದ ಮುಳ್ಳಿಕಟ್ಟೆ ಸರ್ಕಲ್ ವಾಹನ ಸವಾರರಿಗೆ ಕಂಟಕವಾಗಿದ್ದು ಸರ್ಕಲ್ ಅನ್ನು ವೈಜ್ಞಾನಿಕ ರೀತಿಯಲ್ಲಿ ನಿರ್ಮಾಣ ಮಾಡಬೇಕ್ಕೆನ್ನುವುದು ಸಾರ್ವಜನಿಕರ ಹಲವು ವರ್ಷಗಳ ಬೇಡಿಕೆ.ಹೆದ್ದಾರಿ ಇಲಾಖೆ ಇಲ್ಲಿ […]





























































































































































































































































































































































































































































































































































































































































































































































































































































































































































































































































































































































































































































































































































































































































































