ಕೊಲ್ಲೂರು:ಮನೆ ಮೇಲೆ ಮಣ್ಣು ಕುಸಿದು ಬಿದ್ದು ಮಹಿಳೆ ಸಾವು
ಕುಂದಾಪುರ:ಭಾರಿ ಮಳೆಯಿಂದಾಗಿ ಮನೆ ಮೇಲೆ ಮಣ್ಣು ರಕುಸಿದು ಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕುಂದಾಪುರ ತಾಲೂಕಿನ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.ನಿರಂತರವಾಗಿ ಸುರಿಯುತ್ತಿರುವ ಮಳೆ ಯಿಂದಾಗಿ ಗುಡ್ಡ ಪ್ರದೇಶದಲ್ಲಿನ ಮಣ್ಣು ಮನೆ ಮೇಲೆ ಕುಸಿದು ಬಿದ್ದಿದೆ ಈ ಸಂದರ್ಭದಲ್ಲಿ ಮನೆಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಅಂಬಾ (55) ಎನ್ನುವ ಮಹಿಳೆ ಮಣ್ಣಿನ ರಾಶಿಯಡಿ ಸಿಲುಕಿ ಸಾವನ್ನಪ್ಪಿದ್ದಾರೆ.