ಕೊಲ್ಲೂರು:ಕೆರೆಗೆ ಕಾಲು ಜಾರಿ ಬಿದ್ದು ಇಬ್ಬರು ಮಕ್ಕಳು ಸಾವು,ತಾಯಿ ರಕ್ಷಣೆ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ಳಾಲ ಪಂಚಾಯತ್ ನಂದ್ರೋಳ್ಳಿ ಎಂಬಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.ತಾಯಿಯನ್ನು ರಕ್ಷಣೆ ಮಾಡಿದ ಘಟನೆ ಶನಿವಾರ ನಡೆದಿದೆ.ಧನರಾಜ್ ಸತೀಶ್ 13 (ಗಂಡು ಮಗು),ಛಾಯ ಸತೀಶ್ 7 (ಹೆಣ್ಣು ಮಗು) ಮೃತಪಟ್ಟವರು.ತಾಯಿ ಶೀಲಾ ಸತೀಶ್ ಮಡಿವಾಳ (34) ಸ್ಥಿತಿ ಗಂಭೀರವಾಗಿದೆ.

ಹೇರಂಜಾಲುನಲ್ಲಿ ಶೆಫ್‍ಟಾಕ್ ನ್ಯೂಟ್ರಿಪುಡ್ಸ್ ಪ್ರೈವೇಟ್ ಲಿಮಿಟೆಡ್ ಚಿಕ್ಕಿ,ಚಕ್ಕುಲಿ ಘಟಕ ಉದ್ಘಾಟನೆ

ಕುಂದಾಪುರ:ಬೈಂದೂರು ತಾಲೂಕಿನ ಹೇರಂಜಾಲುನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸಮಾಜ ಸೇವಕ ಉದ್ಯಮಿ ಡಾ.ಗೋವಿಂದ ಬಾಬು ಪೂಜಾರಿ ಅವರ ಮಾಲೀಕತ್ವದ ಶೆಫ್‍ಟಾಕ್ ನ್ಯೂಟ್ರಿಪುಡ್ಸ್ ಪ್ರೈವೇಟ್ ಲಿಮಿಟೆಡ್ ಚಿಕ್ಕಿ,ಚಕ್ಕುಲಿ ಮತ್ತು ಇತರ ಖಾದ್ಯಗಳ ಉತ್ಪಾದನಾ ಘಟಕದ ಉದ್ಘಾಟನಾ ಕಾರ್ಯಕ್ರಮ ಶನಿವಾರ ಅದ್ದೂರಿಯಾಗಿ ನಡೆಯಿತು. ಗೌರಿಗದ್ದೆ ಆಶ್ರಮ ಅವಧೂತ ಶ್ರೀ ವಿನಯ್ ಗುರೂಜಿ ಅವರು ಚಿಕ್ಕಿ ಉತ್ಪನವನ್ನು ಬಿಡುಗಡೆಗೊಳಿಸಿ ಆಶೀರ್ವಚನ ನೀಡಿ ಮಾತನಾಡಿ,ಮಹಿಳೆಯರಿಗೆ ಉದ್ಯೋಗ ಸೃಷ್ಟಿಸುವ ಉದ್ದೇಶದಿಂದ ಬ್ರಹ್ಮಶ್ರೀ ನಾರಾಯಣ ಗುರು ಅವರು ತೆಂಗಿನ ನಾರಿನಿಂದ ಹಗ್ಗವನ್ನು ಕಟ್ಟಿ ಕೊಡುವ ಕಾಯಕಕ್ಕೆ ಮುನ್ನುಡಿಯನ್ನು […]

ಸ್ಟೆಲ್ಲಾ ಮಾರಿಸ್ ಪ್ರೌಢ ಶಾಲೆ ಗಂಗೊಳ್ಳಿ :ಶಾಲಾ ಸಂಸತ್ತು ಉದ್ಘಾಟನೆ

ಸ್ಟೆಲ್ಲಾ ಮಾರಿಸ್ ಶಾಲೆಯ ಸಂಸತ್ತಿನ ಉದ್ಘಾಟನಾ ಸಮಾರಂಭವು ದಿನಾಂಕ: 2024, ಜೂನ್ 25 ರಂದು ಬಹಳ ಅರ್ಥಪೂರ್ಣವಾಗಿ ಶಾಲಾ ಸಭಾಂಗಣದಲ್ಲಿ ಜರುಗಿತು. ಈ ಕಾರ್ಯಕ್ರಮವನ್ನು ಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಕ್ರೆಸೆನ್ಸ್ ಎ.ಸಿ, ಸಿಸ್ಟರ್ ಡಯಾನ ಎ. ಸಿ, ಶಾಲೆಯ ಹಳೆ ವಿದ್ಯಾರ್ಥಿನಿ ಪ್ರಸ್ತುತ ಗುಮಾಸ್ತೆ ಶ್ರೀಮತಿ ಸಂಧ್ಯಾ, ಶಾಲಾ ನಾಯಕ ಮತ್ತು ಉಪನಾಯಕ ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಸತ್ತಿನ ರಾಜ್ಯಪಾಲೆ ಸಿಸ್ಟರ್ ಕ್ರಿಸ್ಸೆನ್ಸ್ ಮಂತ್ರಿಗಳ ಪ್ರತಿಜ್ಞೆ ಸ್ವೀಕರಿಸಿದರು. ಮುಖ್ಯ ಅತಿಥಿಯಾಗಿ, ರಕ್ಷಕ ಶಿಕ್ಷಕ ಸಂಘದ ನೂತನ ಪದಾಧಿಕಾರಿ […]

You cannot copy content of this page