ಮನೆ ಮೇಲೆ ಗುಡ್ಡದ ಬರೆ ಕುಸಿದು ಹಾನಿ,ಮನೆ ಮಂದಿ ಪಾರು

ಮಂಗಳೂರು:ದ.ಕ ಜಿಲ್ಲೆಯಲ್ಲಿ ಸುರಿಯುತ್ತಿರುವ ಬಾರಿ ಮಳೆಗೆ ಪುತ್ತೂರಿನ ಬನ್ನೂರು ಎಂಬಲ್ಲಿ ಮಜೀದ್ ಎನ್ನುವವರ ಮನೆ ಮೇಲೆ ಬರೆ ಕುಸಿದ ಪರಿಣಾಮ ಮನೆ ಧಾರಾಶಾಯವಾಗಿದೆ.ಭಾಗಶಹ ಹಾನಿ ಉಂಟಾಗಿದೆ.ಮನೆಯೊಳಗಿದ್ದ ಮಕ್ಕಳು ಮತ್ತು ಮನೆ ಮಂದಿ ಪವಾಡ ರೀತಿಯಲ್ಲಿ ಪಾರಾಗಿದ್ದಾರೆ.

ತುಂಬಿ ಹರಿಯುತ್ತಿದೆ ಕುಮಾರಧಾರ,ನದಿಗೆ ಇಳಿಯದಂತೆ ಭಕ್ತರಿಗೆ ಎಚ್ಚರಿಕೆ

ಮಂಗಳೂರು:ಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗದಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಕುಮಾರಧಾರ ಸ್ನಾನಘಟ್ಟ ಮುಳುಗಡೆ ಆಗಿದೆ.ಮುಂಜಾಗೃತ ಕ್ರಮದ ಭಾಗವಾಗಿ ನದಿಗಿಳಿಯದಂತೆ ಭಕ್ತಾದಿಗಳಿಗೆ ಸೂಚನೆ ನೀಡಲಾಗಿದೆ.ಭಕ್ತರುನದಿ ದಡ ದಲ್ಲೇ ತೀರ್ಥಸ್ನಾನ ಮಾಡಿ ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಮಾಡುತ್ತಿದ್ದಾರೆ.ಕುಮಾರಧಾರ ಉಪನದಿ ದರ್ಪಣತೀರ್ಥ ಕೂಡ ಮಳೆನೀರಿನಿಂದ ತುಂಬಿ ಹರಿಯುತಿದೆ.ಕುಮಾರಧಾರ ನದಿತೀರದಲ್ಲಿ ದೇವಳದ ಭದ್ರತಾ ಸಿಬ್ಬಂದಿಗಳು,ಹೋಮ್ಗರ್ಡ್ಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.

ಗದ್ದೆಗಿಳಿದು ಭತ್ತದ ಸಸಿ ನಾಟಿ ಮಾಡಿದ,ಯು.ಬಿ ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು

ಬೈಂದೂರು:ಶಾಲೆಗಳಲ್ಲಿ ಸಾಮಾನ್ಯವಾಗಿ ಆಟ – ಪಾಠದ ಜತೆಗೆ ಕೆಲ ವೇಳೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವುದು ಸಾಮಾನ್ಯ.ಆದರೆ, ಬೈಂದೂರು ತಾಲೂಕಿನ ಯು ಬಿ ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆಯೊಂದರಲ್ಲಿ ಮಕ್ಕಳನ್ನು ಗದ್ದೆಗೆ ಇಳಿಸಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸುವ ಮೂಲಕ ವಿಭಿನ್ನವಾಗಿ ಪಾಠ ಮಾಡಲಾಗಿದೆ.ನಾಲ್ಕು ಗೋಡೆಗಳ ಮಧ್ಯೆ ಪಾಠ ಕೇಳುತ್ತಾ ತಲ್ಲೀನರಾಗುತ್ತಿದ್ದ, ಮಕ್ಕಳಿಗೆ ಗದ್ದೆ ಎಂದರೆ ಏನು?, ಬೇಸಾಯ ಎಂದರೆ ಹೇಗೆ?, ನಾಟಿ ಹೇಗೆ ಮಾಡಬೇಕು ಎಂದೆಲ್ಲ ಮಾಹಿತಿ ನೀಡುತ್ತಾ ಮಕ್ಕಳನ್ನು ಕೃಷಿ ಚಟುವಟಿಕೆಯಲ್ಲಿ ತೊಡಗಿಸಲಾಗಿತ್ತು.ಕೃಷಿಕರಾದ ಮಂಜುನಾಥ ಶೆಟ್ಟಿ, ರಾಘವೇಂದ್ರ,ಕೃಷ್ಣ […]

You cannot copy content of this page