ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವಯಿತಿಂದ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ,ಉದ್ಘಾಟನಾ ಕಾರ್ಯಕ್ರಮ

ಕುಂದಾಪುರ:ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ವತಿಯಿಂದ ಸಮೃದ್ಧ ಜನಸೇವಾ ಚಾರಿಟೇಬಲ್ ಟ್ರಸ್ಟ್ ಬೈಂದೂರು ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ ಜಿಲ್ಲೆ ಅವರ ಸಹಕಾರದೊಂದಿಗೆ ಉಡುಪಿ ಜಿಲ್ಲೆಯ 350 ಸರಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ 41,000 ಜೊತೆ ಶಾಲಾ ಸಮವಸ್ತ್ರ ವಿತರಣೆ ಮತ್ತು ಉದ್ಘಾಟನಾ ಕಾರ್ಯಕ್ರಮ ಬೈದೂರು-ಯಡ್ತರೆ ಜೆ.ಎನ್.ಆರ್ ಸಭಾಂಗಣದಲ್ಲಿ ಶನಿವಾರ ನಡೆಯಿತು.ಮಾನ್ಯ ಸಭಾಪತಿಗಳು ಕರ್ನಾಟಕ ವಿಧಾನಸಭೆ ಯು.ಟಿ.ಖಾದರ್ ಅವರು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಸಮವಸ್ತ್ರ […]

ನೆರೆ ಪೀಡಿತ ಪ್ರದೇಶಗಳಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ,ತುರ್ತು ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ

ಬೈಂದೂರು:ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಕ್ಷೇತ್ರದ ಕೆಲವು ಭಾಗದಲ್ಲಿ ನೆರೆ ಆವರಿಸಿದ್ದ ಹಿನ್ನೆಲೆಯಲ್ಲಿ ಶಾಸಕರಾದ ಗುರುರಾಜ್ ಗಂಟಿಹೊಳೆಯವರು ಬೆಂಗಳೂರಿನಲ್ಲಿ ತಮ್ಮ ಪೂರ್ವ ನಿಯೋಜಿತ ಕಾರ್ಯಕ್ರಮಗಳನ್ನು ಹಠತ್ ರದ್ದುಗೊಳಿಸಿ ನೇರವಾಗಿ ಕ್ಷೇತ್ರಕ್ಕೆ ಆಗಮಿಸಿ,ಶುಕ್ರವಾರ ಬೆಳಗ್ಗೆಯಿಂದ ನೆರೆಪೀಡಿದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಾರ್ವಜನಿಕರು ಸೇರಿದಂತೆ ನೆರೆಹಾನಿಗೆ ಒಳಗಾದವರೊಂದಿಗೆ ಮಾತುಕತೆ ನಡೆಸಿದರು.ನಾವುಂದ ಭಾಗದ ಸಾಲ್ಬುಡ, ನಾಡಾ ಗ್ರಾಮದ ಚಿಕ್ಕಳ್ಳಿ, ಸಂಸಾಡಿ, ಹೆಮ್ಮುಂಜಿ, ಕೊಂಣ್ಕೀ ಪ್ರದೇಶಗಳಲ್ಲಿ ಮಳೆಯಿಂದಾಗಿ ನೆರೆ, ಪ್ರವಾಹ, ಗುಡ್ಡೆ ಕುಸಿತ ಉಂಟಾಗಿದ್ದು ಸ್ಥಳಕ್ಕೆ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು […]

ನೆರೆ ಬಾಧಿತ ಪ್ರದೇಶದ ದನಕರುಗಳಿಗೆ ಔಷಧ ವಿತರಣೆ

ಕುಂದಾಪುರ:ನೆರೆ ನೀರಿನಿಂದ ಜಲಾವೃತ್ತವಾಗಿರುವ ಬೈಂದೂರು ತಾಲೂಕಿನ ನಾವುಂದ ಸಾಲ್ಬುಡ ಪ್ರದೇಶಕ್ಕೆ ಬೈಂದೂರು ಪಶು ಆಸ್ಪತ್ರೆ ವೈದ್ಯಾಧಿಕಾರಿ ನಾಗರಾಜ ಖಾರ್ವಿ ಮರವಂತೆ ಮತ್ತು ಸಿಬ್ಬಂದಿಗಳು ದೋಣಿಯಲ್ಲಿ ತೆರಳಿ ದನಕರುಗಳಿಗೆ ಅಗತ್ಯವಾಗಿ ಬೇಕಾಗಿರುವ ಔಷಧಗಳನ್ನು ಶುಕ್ರವಾರ ವಿತರಿಸಿದರು.ಸ್ಥಳೀಯರಾದ ನಾಗರಾಜ ನಾವುಂದ ಸಹರಿಸಿದರು.

You cannot copy content of this page