ಆಲೂರು ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಗಾನ ತರಗತಿ ಉದ್ಘಾಟನೆ

ಕುಂದಾಪುರ:ತಾಲೂಕಿನ ಬೈಂದೂರು ವಲಯದ ಆಲೂರು ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಗಾನ ಉದ್ಘಾಟನೆ ಕಾರ್ಯಕ್ರಮ ಭಾನುವಾರ ನಡೆಯಿತು.ಬಡಗುತಿಟ್ಟಿನ ಖ್ಯಾತ ಯಕ್ಷಗಾನ ಕಲಾವಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಸುರೇಂದ್ರ ಆಲೂರು ಉದ್ಘಾಟಿಸಿದರು.ಆಲೂರು ಪಂಚಾಯಿತಿ ಅಧ್ಯಕ್ಷ ರಾಜೇಶ್ ಎನ್ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು.ಆಲೂರು ಪ್ರೌಢಶಾಲೆ ಮುಖ್ಯ ಶಿಕ್ಷಕ ನಾರಾಯಣ ಶೆಟ್ಟಿ,ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಲೀನಾ ಕಾರ್ಢಿನ್,ಯಕ್ಷಗುರು ಪ್ರದೀಪ ಶೆಟ್ಟಿ ನಾರ್ಕಳಿ,ನೋಡಲ್ ಶಿಕ್ಷಕಿ ಅಮೃತಾ,ಶಿಕ್ಷಕವೃಂದವರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಶಿಕ್ಷಕರಾದ ಉದಯ ಕುಮಾರ ಶೆಟ್ಟಿ ಸ್ವಾಗತಿಸಿದರು.ಶಶಿಧರ ಶೆಟ್ಟಿ ನಿರ್ವಹಿಸಿದರು.ಪ್ರವೀಣ ಕುಮಾರ ಶೆಟ್ಟಿ ವಂದಿಸಿದರು.ಬೈಂದೂರು ಕ್ಷೇತ್ರದ ಶಾಸಕ ಗುರುರಾಜ […]

ಕೆಸರಿನಲ್ಲೊಂದು ದಿನ ಸಾಂಪ್ರದಾಯಿಕ ಕ್ರೀಡಾ ಹಬ್ಬ

ಕುಂದಾಪುರ:ಟೀಮ್ ತ್ರಾಸಿ ವತಿಯಿಂದ ಕೆಸರಿನಲ್ಲೊಂದು ದಿನ ಸಾಂಪ್ರದಾಯಿಕ ಕ್ರೀಡಾ ಹಬ್ಬ ಕಾರ್ಯಕ್ರಮ ಇಪ್ಪಿಬೈಲು ಬೊಬ್ಬರ್ಯ ದೇವಸ್ಥಾನ ವಠಾರದ ಗದ್ದೆ ಬೈಲಿನಲ್ಲಿ ಭಾನುವಾರ ನಡೆಯಿತು.ಕೆಸರಿನಲ್ಲೊಂದು ದಿನ ಕ್ರೀಡಾ ಹಬ್ಬದ ಅಂಗವಾಗಿ ಪುರುಷರಿಗೆ,ಮಹಿಳೆಯರಿಗೆ,ಮಕ್ಕಳಿಗೆ ವೈವಿಧ್ಯಮಯವಾದ ಕ್ರೀಡೆಗಳನ್ನು ಆಯೋಜಿಸಲಾಯಿತು.ಟೀಮ್ ತ್ರಾಸಿ ಬಳಗದ ಸದಸ್ಯರು,ಗ್ರಾಮಸ್ಥರು ಉಪಸ್ಥಿತರಿದ್ದರು.

ಹೊಸಾಡು ಶಾಲೆಗೆ ಅಕ್ಷರ ರಥ ಕೊಡುಗೆ

ಕುಂದಾಪುರ:ತಾಲೂಕಿನ ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಹೊಸಾಡು ಶಾಲೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೊಸಾಡು ಶಾಲೆ ಶತಮಾನೋತ್ಸವ ಸಮಿತಿ ವತಿಯಿಂದ ಅಕ್ಷರ ರಥವನ್ನು ಶಾಲಾ ಎಸ್‍ಡಿಎಂಸಿ ಸಮಿತಿಗೆ ಭಾನುವಾರ ಹಸ್ತಾಂತರ ಮಾಡಲಾಯಿತು.ಹೊಸಾಡು ಶಾಲೆ ಶತಮಾನೋತ್ಸವ ಸಮಿತಿ ಅಧ್ಯಕ್ಷ ಡಾ.ಉಮೇಶ್ ಪುತ್ರನ್,ಎಸ್‍ಡಿಎಂಸಿ ಅಧ್ಯಕ್ಷೆ ರೇಖಾ ಗಣೇಶ್,ನಿವೃತ್ತ ಮುಖ್ಯೋಪಾಧ್ಯಾಯರಾದ ಸದಾಶಿವ ಶೆಟ್ಟಿ ಮತ್ತು ತೇಜಪ್ಪ ಶೆಟ್ಟಿ,ರಾಜೀವ ಶೆಟ್ಟಿ,ಡಾ.ಕಿಶೋರ್ ಕುಮಾರ್ ಶೆಟ್ಟಿ,ಎಸ್‍ಡಿಎಂಸಿ ಸದಸ್ಯರು,ಅಡುಗೆ ಸಿಬ್ಬಂದಿಗಳು ಉಪಸ್ಥಿತರಿದ್ದರು.ಮುಖ್ಯ ಶಿಕ್ಷಕ ರಾಜೇಶ್ ಸ್ವಾಗತಿಸಿ,ವಂದಿಸಿದರು.ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಶಾಲಾ ವಾಹನ ಧಾವಿಸಿ ಬರುವುದರಿಂದ ಗ್ರಾಮೀಣ ಪ್ರದೇಶದ […]

You cannot copy content of this page