ಲಯನ್ಸ್ ಪ್ರಾಂತೀಯ ಸಮ್ಮೇಳನ,ಕನಕ 2025 ಕಾರ್ಯಕ್ರಮ ಉದ್ಘಾಟನೆ
ಕುಂದಾಪುರ:ಕಳೆದ ಹತ್ತೊಂಭತ್ತು ವರ್ಷಗಳಿಂದ ಅಂತರಾಷ್ಟ್ರೀಯ ಲಯನ್ಸ್ ಕ್ಲಬ್ ಮೂಲಕ ಮುಂಬೈ ಸೇರಿದಂತೆ ಉಡುಪಿ ಜಿಲ್ಲೆಯ ಭಾಗದಲ್ಲಿ ಸಾಮಾಜಿಕ ಕಾರ್ಯಗಳನ್ನು ಮಾಡಿಕೊಂಡು ಬರಲಾಗುತ್ತಿದ್ದು.ಅಶಕ್ತರ ಬಾಳಿಗೆ ನೆರವನ್ನು ಒದಗಿಸಿಕೊಡುವುದರ ಜತೆಗೆ ಸೇವಾ ಕಾರ್ಯಗಳನ್ನು ಮಾಡುತ್ತಾ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತನ್ನು ನೀಡಲಾಗುತ್ತಿದೆ ಎಂದು ಉದ್ಯಮಿಗಳಾದ ಲಯನ್ ಪ್ರಾಂತೀಯ ಅಧ್ಯಕ್ಷ ಎಂಜೆಎಫ್ ಕನಕ ಜಗದೀಶ ಶೆಟ್ಟಿ ಕುದ್ರಕೋಡು ಹೇಳಿದರು.ಲಯನ್ಸ್ ಇಂಟರ್ ನ್ಯಾಷನಲ್ ಪ್ರಾಂತ್ಯ 4 ಜಿಲ್ಲೆ 317ಸಿ ವತಿಯಿಂದ ಜ್ಯುವೆಲ್ ಪಾರ್ಕ್ ಹೆಮ್ಮಾಡಿಯಲ್ಲಿ ಶನಿವಾರ ನಡೆದ ಲಯನ್ಸ್ ಪ್ರಾಂತೀಯ ಸಮ್ಮೇಳನ ಕನಕ-2025 […]