ಸ್ವಾತಿ ಸ್ವಸಹಾಯ ಸಂಘಕ್ಕೆ ಸನ್ಮಾನ

ಕುಂದಾಪುರ:25 ವರ್ಷಗಳನ್ನು ಪೂರೈಸಿರುವ,3 ಕೋಟಿಗೂ ಅಧಿಕ ವ್ಯವಹಾರವನ್ನು ನಡೆಸಿಕೊಂಡು ಬಂದಿರುವ ನವೋದಯ ಸ್ವಾತಿ ಸ್ವಸಹಾಯ ಸಂಘ ಮರವಂತೆ ಅದರ ಸದಸ್ಯರನ್ನು ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಧಾನ ಕಛೇರಿ ಮತ್ತು ಮೇಲಂತಸ್ತಿನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಡಾ.ಎಂ ರಾಜೇಂದ್ರ ಕುಮಾರ್ ಅವರು ಸನ್ಮಾನಿಸಿದರು.ಈ ಸಂದರ್ಭದಲ್ಲಿ ಸಂಘದ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಾಜು ಎಸ್ ಪೂಜಾರಿ,ಶಾಸಕ ಗುರುರಾಜ್ ಗಂಟಿಹೊಳೆ,ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ,ಬಿ.ಎಂ ಸುಕುಮಾರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಡಾ.ಎಂ ರಾಜೇಂದ್ರ ಕುಮಾರ್‍ಗೆ ಸಹಕಾರಿ ಸಂವರ್ಧಕ ಪ್ರಶಸ್ತಿ ಪ್ರದಾನ

ಕುಂದಾಪುರ:ದ.ಕ ಜಿಲ್ಲಾ ಸಹಕಾರಿ ಬ್ಯಾಂಕ್ ಮಂಗಳೂರು ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರಿಗೆ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಸಂಘದ ಪ್ರಧಾನ ಕಚೇರಿ ನವೀಕೃತ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಹಕಾರಿ ಸಂವರ್ಧಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ಸಂಘದ ಅಧ್ಯಕ್ಷ ಎಸ್.ರಾಜು ಪೂಜಾರಿ,ಶಾಸಕ ಗುರುರಾಜ ಗಂಟಿಹೊಳೆ,ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ,ಬಿ.ಎಂ ಸುಕುಮಾರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಪ್ರಧಾನ ಕಛೇರಿ ನವೀಕೃತ ಮೇಲಂತಸ್ತಿನ ಕಟ್ಟಡ ಉದ್ಘಾಟನೆ

ಕುಂದಾಪುರ:ಬೈಂದೂರು ತಾಲೂಕಿನ ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಪ್ರಧಾನ ಕಛೇರಿ ಮತ್ತು ಮೇಲಂತಸ್ತಿನ ನವೀಕೃತ ಕಟ್ಟಡದ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ನಾವುಂದಲ್ಲಿ ಶನಿವಾರ ಅದ್ದೂರಿಯಾಗಿ ನಡೆಯಿತು.ಸಂಘದ ನವೀಕೃತ ಪ್ರಧಾನ ಕಛೇರಿ ಮತ್ತು ಮೇಲಂತಸ್ತಿನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಅಂಗವಾಗಿ ಸಂಗೀತ ರಸಮಂಜರಿ ಕಾರ್ಯಕ್ರಮ ಹಾಗೂ ಯಕ್ಷ ರಾಘವ ಜನ್ಸಾಲೆ ಪ್ರತಿಷ್ಠಾ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಿಂದ ದಿ.ಕಾಳಿಂಗ ನಾವುಡ ವಿರಚಿತ ನಾಗಶ್ರೀ ಯಕ್ಷಗಾನ ಕಾರ್ಯಕ್ರಮ ಜರುಗಿತು.ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಅಧ್ಯಕ್ಷರಾದ,ಕರ್ನಾಟಕ […]

You cannot copy content of this page