ಕಂಚುಗೋಡು ಸನ್ಯಾಸಿ ಬಲ್ಲೆಯಲ್ಲಿ ನೂತನ ಅಂಗನವಾಡಿ ಕೇಂದ್ರ ಉದ್ಘಾಟನೆ

ಕುಂದಾಪುರ:ಮೀನುಗಾರ ಕುಟುಂಬದ ಸದಸ್ಯರೆ ಹೆಚ್ಚಾಗಿ ವಾಸಮಾಡುತ್ತಿರುವ ಇವೊಂದು ಪರಿಸರದಲ್ಲಿ ಅಂಗನವಾಡಿ ಕೇಂದ್ರವನ್ನು ತೆರೆದಿರುವುದರಿಂದ ಜನರಿಗೆ ಬಹಳಷ್ಟು ಅನುಕೂಲವಾಗಲಿದೆ.ಸ್ವಂತ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರ ಕಾರ್ಯಚರಣೆ ಮಾಡಬೇಕಾಗಿರುವುದರಿಂದ ಪಂಚಾಯಿತಿ ಕಡೆಯಿಂದ ಎಲ್ಲಾ ರೀತಿಯಿಂದಲೂ ಸಹಕಾರ ನೀಡಲಾಗುವುದು ಎಂದು ಗುಜ್ಜಾಡಿ ಪಂಚಾಯಿತಿ ಅಧ್ಯಕ್ಷ ತಮ್ಮಯ್ಯ ದೇವಾಡಿಗ ಹೇಳಿದರು.ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ಕಂಚುಗೋಡು ಸನ್ಯಾಸಿ ಬಲ್ಲೆಯಲ್ಲಿ ನೂತನವಾಗಿ ಆರಂಭಗೊಂಡಿರುವ ಅಂಗನವಾಡಿ ಕೇಂದ್ರವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.ಗುಜ್ಜಾಡಿ ಪಂಚಾಯಿತಿ ಸದಸ್ಯ ಜನಾರ್ದನ ಪೂಜಾರಿ,ಗಣಪತಿ ಪಟೇಲ್,ಸದಾಶಿವ,ಅಂಗನವಾಡಿ ಶಿಕ್ಷಕಿಯರು,ಗ್ರಾಮಸ್ಥರು,ಆರೋಗ್ಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಅನಾರೋಗ್ಯ ಪೀಡಿತ ವ್ಯಕ್ತಿಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ‌ ರಕ್ತದಾನ

ಕುಂದಾಪುರ:ಅನಾರೋಗ್ಯ ಪೀಡಿತರಾಗಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ಶಂಕರನಾರಾಯಣ ಗ್ರಾಮದ ಉದಯ ಆಚಾರ್ಯ ಎನ್ನುವ ವ್ಯಕ್ತಿಗೆ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ‌ ಅವರು ಖುದ್ದಾಗಿ ರಕ್ತದಾನವನ್ನು ಮಾಡುವುದರ ಮುಖೇನ ಸಾಮಾಜಿಕ ಕಾಳಜಿ ಮೆರೆದಿದ್ದಾರೆ.ಕುಂದಾಪುರ ತಾಲೂಕಿನ ಶಂಕರನಾರಾಯಣ ಭಾಗದ ಉದಯ್ ಆಚಾರ್ಯ ಎಂಬವರು ಅನಾರೋಗ್ಯ ನಿಮಿತ್ತ ಕುಂದಾಪ್ರದ ಆಸ್ಪತ್ರೆಗೆ ದಾಖಲಾಗಿದ್ದರು‌.ಅವರಿಗೆ ತುರ್ತಾಗಿ ರಕ್ತದ ಅವಶ್ಯಕತೆವಿದ್ದು.ಬ್ಲಡ್ ಬ್ಯಾಂಕ್‌ಗಳಲ್ಲಿ ವಿಚಾರಿಸಿದಾಗ ರಕ್ತದ ಕೊರತೆಯಿಂದ ಸೂಕ್ತ ಸಮಯದಲ್ಲಿ ರೋಗಿಗೆ ರಕ್ತ ಸಿಗಲಿಲ್ಲ.ರೋಗಿಗೆ ತುರ್ತು ಸಂದರ್ಭದಲ್ಲಿ ರಕ್ತ ನೀಡಲೆ ಬೇಕಾಗಿದ್ದರಿಂದ ಕುಟುಂಬ ಸಂಕಷ್ಟಕ್ಕೆ […]

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ ವೃತ್ತಿ ಕೌಶಲ್ಯ ಕಾರ್ಯಾಗಾರ

ಕುಂದಾಪುರ:ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ JCI ಸಿಟಿ ಕುಂದಾಪುರ ಆಯೋಜನೆಯ ‘Think big grow big’ ಶೀರ್ಷಿಕೆ ಅಡಿಯಲ್ಲಿ ವೃತ್ತಿ ಕೌಶಲ್ಯ ಕಾರ್ಯಕ್ರಮ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಜೆಸಿಐ ಕ್ಯೂನಿ ಡಿ ಕೊಸ್ಟಾ ವಿದ್ಯಾರ್ಥಿಗಳಿಗೆ ವೃತ್ತಿ ಕೌಶಲ್ಯದ ಕುರಿತಾಗಿ ಸಂಪೂರ್ಣ ಮಾಹಿತಿ ನೀಡಿದರು.ಜೆಸಿಐ ಸಿಟಿ ಕುಂದಾಪುರದ ಅಧ್ಯಕ್ಷ ರಾಘವೇಂದ್ರ ಕುಲಾಲ್,ಜೆಸಿಐ ನಿಕಟಪೂರ್ವ ಅಧ್ಯಕ್ಷ ಹುಸೆನ್‌ ಹೈಕಾಡಿ, ಮತ್ತು ವಿಜಯ ಕುಮಾರ್ ಹಾಗೂ ಜನತಾ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕರಾದ ಶ್ರೀ ಹರ್ಷ ಶೆಟ್ಟಿ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು,ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು.ವಾಣಿಜ್ಯ […]

You cannot copy content of this page