ತ್ರಾಸಿ ಅಂಬಾ ಶೋ ರೂಂ ಗೆ ಆಕಸ್ಮಿಕ ಬೆಂಕಿ,ಕೋಟ್ಯಂತರ ರೂಪಾಯಿ ನಷ್ಟ

ಕುಂದಾಪುರ ತಾಲೂಕಿನ ಪ್ರಸಿದ್ಧ ತ್ರಾಸಿ ಅಂಬಾ ಶೋ ರೂಂ ಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ ಯಿಂದಾಗಿ ಶೋ ರೂಂ ದಗದಹಿಸಿದೆ.ಕೋಟಿ.ಗೂ ಅಧಿಕ ನಷ್ಟ ಸಂಭವಿಸಿದ ಘಟನೆ ಭಾನುವಾರ ನಡೆದಿದೆ. ಆಕಸ್ಮಿಕವಾಗಿ ತಗುಲಿದ ಬೆಂಕಿ ಶೊ ರೂಂ ಇಡಿ ವ್ಯಾಪಿಸಿದ್ದು ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.ಅಂಬಾ ಶೊ ರೂಂ ಬಿಲ್ಡಿಂಗ್ ನಲ್ಲಿ,ಅಂಬಾ ಹೋಮ್ ಅಪ್ಲೆಯನ್ಸ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೈಂದೂರು ತಾಲೂಕು ಕಛೇರಿ, ಪೋಸ್ಟ್ ಆಫೀಸ್,ಬಟ್ಟೆ ಶೋ ರೂಂ, ಲಾಡ್ಜ್ ಸೇರಿದಂತೆ ಹಲವು ಕಛೇರಿಗಳು […]

ಮರಬಿದ್ದು ವಿದ್ಯುತ್ ಕಂಬಕ್ಕೆ ಹಾನಿ

ಕುಂದಾಪುರ:ಸತತವಾಗಿ ಸುರಿಯುತ್ತಿರುವ ಬಾರಿ ಗಾಳಿ ಮಳೆಗೆ ಗುಜ್ಜಾಡಿ ಗ್ರಾಮದ ನಾಯಕವಾಡಿಯಲ್ಲಿ ವಿದ್ಯುತ್ ಕಂಬದ ಮೇಲೆ ಮರ ಬಿದ್ದ ಪರಿಣಾಮ ವಿದ್ಯುತ್ ಕಂಬಕ್ಕೆ ಹಾನಿ ಆಗಿದೆ.ಆಸು ಪಾಸಿನ ಪ್ರದೇಶದ ಮನೆಗಳಿಗೆ ವಿದ್ಯುತ್ ಸಂಪರ್ಕ ವ್ಯವಸ್ಥೆ ಕಡಿತಗೊಂಡಿತ್ತು.ಮೆಸ್ಕಾಂ ಸಿಬ್ಬಂದಿಗಳು ಮರವನ್ನು ತೆರವುಗೊಳಿಸುವುದರ ಮುಖೇನ ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಸರಿಪಡಿಸಿದರು.

ಸಾರ್ವಜನಿಕ ರಕ್ತದಾನ ಶಿಬಿರ ಉದ್ಘಾಟನೆ

ಕುಂದಾಪುರ:ಜೀವ ಜಲದಷ್ಟೆ ರಕ್ತವೂ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ ಪ್ರತಿಯೊಬ್ಬರು ಕ್ಲಪ್ತ ಸಮಯದಲ್ಲಿ ರಕ್ತವನ್ನು ದಾನ ಮಾಡುವುದರಿಂದ ರೋಗಿಗಳ ಪ್ರಾಣವನ್ನು ಕಾಪಾಡಬಹುದು ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.ರಾಮೇಶ್ವರ ಸ್ಪೋಟ್ರ್ಸ್ ಕ್ಲಬ್ ಆಲೂರು,ಗ್ರಾಮ ಪಂಚಾಯಿತಿ ಆಲೂರು,ಶ್ರೀರಾಮೇಶ್ವರ ಯಕ್ಷಗಾನ ಕಲಾ ಸಂಘ ಆಲೂರು,ಗೆಳೆಯರ ಬಳಗ ಆಲೂರು,ಕಲ್ಪತರು ಕಲಾವಿದರು ಆಲೂರು ಮತ್ತು ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಯೋಗದೊಂದಿಗೆ ಮೂಕಾಂಬಿಕ ಸಭಾಭವನ ಆಲೂರುನಲ್ಲಿ ಭಾನುವಾರ ನಡೆದ ಸಾರ್ವಜನಿಕ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು […]

You cannot copy content of this page