ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ದಾರುಣ ಸಾವು
ಕುಂದಾಪುರ:ಮನೆಯ ಗೇಟ್ ಮುಂದೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಎಂಬಲ್ಲಿ ಭಾನುವಾರ ನಡೆದಿದೆ. ಹಡವಿನಕೋಣೆ ಮುದ್ರುಮಕ್ಕಿ ಸಮೀಪದ ನಿವಾಸಿ ಕುರುಡಿ ಇರ್ಷಾದ್ (52) ಮೃತಪಟ್ಟಿದ್ದಾರೆ.ಶನಿವಾರ ತಡರಾತ್ರಿ ಸುರಿದ ಬಾರಿ ಗಾಳಿ ಮಳೆಗೆ ಹಡವಿನಕೋಣೆಯಿಂದ ಮುದ್ರುಮಕ್ಕಿಗೆ ತೆರಳುವ ಮಾರ್ಗದಲ್ಲಿದ್ದ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು.ಇರ್ಷಾದ್ ಅವರು ಮನೆಯೊಳಕ್ಕೆ ಸತ್ತುಹೋದ ಇಲಿಯನ್ನು ಹೊರಕ್ಕೆ ಬೀಸಾಡುವ ಸಲುವಾಗಿ ಬೆಳಿಗ್ಗೆ ಗೇಟ್ ಹೊರಕ್ಕೆ ಬಂದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ […]