ಸೇತುವೆ ಸುರಕ್ಷ ಗಾರ್ಡ್ ಗೆ ಡಿಕ್ಕಿ ಹೊಡೆದ ಬಸ್ ಪ್ರಯಾಣಿಕರು ಪಾರು

ಉಡುಪಿ:ಉಡುಪಿಯಿಂದ ಬ್ರಹ್ಮಾವರದ ಕಡೆಗೆ ಚಲಿಸುತ್ತಿದ್ದ ಬಸ್ಸೊಂದು ಸ್ವರ್ಣ ನದಿ ಕಲ್ಯಾಣ್ಪುರ ಸೇತುವೆಯ ಗಾರ್ಡ್ ಗೆ ಡಿಕ್ಕಿ ಹೊಡೆದಿದೆ.ಅಪಘಾತದ ರಭಸಕ್ಕೆ ಸೇತುವೆ ಗಾರ್ಡ್ ಮುರಿದು ನದಿಗೆ ಬಿದ್ದಿದೆ.ನದಿಗೆ ಉರುಳಿ ಬೀಳುವ ಪರಿಸ್ಥಿತಿಯಲ್ಲಿದ್ದ ಬಸ್ ಅಪಾಯದಿಂದ ಪಾರಾಗಿದೆ.ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.ಅದೆ ಸಮಯದಲ್ಲಿ ಸೇತುವೆ ಕೆಳಗಡೆ ದೋಣಿಯಲ್ಲಿ ಮೀನುಗಾರಿಕೆ ಮಾಡುತಿದ್ದ ಶಂಕರ ಎನ್ನುವವರ ಮೇಲೆ ಸಿಮೆಂಟು ಕಂಬದ ತುಂಡ್ಡು ಮುರಿದು ಬಿದ್ದು ಕೈಗೆ ಹೊಡೆತ ಬಿದ್ದಿದೆ.ರಾಷ್ಟ್ರೀಯ ಹೆದ್ದಾರಿ 66 ರ ಕಲ್ಯಾಣಪುರ ಸೇತುವೆ 1963 ರಲ್ಲಿ ನಿರ್ಮಾಣವಾಗಿದ್ದು 6 ದಶಗಳಷ್ಟು ಹಳೆಯದಾಗಿದೆ. […]

ಭೂಮಿ ಹಕ್ಕಿಗಾಗಿ ಕೊರಗ ಕುಟುಂಬಗಳಿಂದ ಅನಿರ್ದಿಷ್ಟಾವಧಿ ಮುಷ್ಕರ

ಕುಂದಾಪುರ:ಆಲೂರು ಗ್ರಾಮದಲ್ಲಿ ವಾಸವಾಗಿರುವ ಕೊರಗ ಕುಟುಂಬಗಳಿಗೆ ಡಾ. ಮಹಮ್ಮದ್ ಫಿರ್ ವರದಿ ಪ್ರಕಾರ ಭೂಮಿ ನೀಡಲು ಆಗ್ರಹಿಸಿ ಹಲವಾರು ಬಾರಿ ಮನವಿಯನ್ನು ಸಲ್ಲಿಕೆ ಮಾಡಿದ್ದರು ಇದುವರೆಗೆ ಯಾವುದೇ ರೀತಿಯ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ,ಜಿಲ್ಲಾ ಸಂಘಟನಾ ಸಮಿತಿ ಉಡುಪಿ ವತಿಯಿಂದ ಆಲೂರು ಗ್ರಾಮ ಪಂಚಾಯಿತಿ ಎದುರು ಅನಿರ್ದಿಷ್ಟಾವಧಿ ಮುಷ್ಕರವನ್ನು ಸೋಮವಾರ ಮಾಡಲಾಯಿತು.ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಜಿಲ್ಲಾ ಸಂಚಾಲಕ ಶ್ರೀಧರ ನಾಡ ಮಾತನಾಡಿ,ಕೊರಗ ಕುಟುಂಬಗಳಿಗೆ ಎರಡನೇ ಹಂತದಲ್ಲಿ ಭೂಮಿ ಹಂಚಿಕೆ ಮಾಡಲು 10 […]

ಶಕ್ತಿ ಯೋಜನೆಯಿಂದ ಭಕ್ತರ ಸಂಖ್ಯೆ ಹೆಚ್ಚಳ: ಡಿಸಿಎಂ ಡಿ.ಕೆ. ಶಿವಕುಮಾರ್

ಮಂಗಳೂರು:ಸರ್ಕಾರದ ಶಕ್ತಿ ಯೋಜನೆಯಿಂದ ರಾಜ್ಯದ ಮೂಲೆ ಮೂಲೆಯಿಂದ ಹೆಚ್ಚಿನ ಭಕ್ತರು ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥನ ದರ್ಶನ ಪಡೆಯುತ್ತಿದ್ದಾರೆ ಎಂದು ಧರ್ಮದರ್ಶಿ ವೀರೇಂದ್ರ ಹೆಗ್ಗಡೆಯವರು ಸಂತೋಷ ಹಂಚಿಕೊಂಡರು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೂಡಿ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಶಿವಕುಮಾರ್ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.ಮುಖ್ಯಮಂತ್ರಿಗಳೊಂದಿಗೆ ಮಂಜುನಾಥನ ಸ್ವಾಮಿ ಮತ್ತು ಅಣ್ಣಪ್ಪ ಸ್ವಾಮಿ ಹಾಗೂ ಅಮ್ಮನವರ ದರ್ಶನ ಮಾಡಿದ್ದೇವೆ.ರಾಜ್ಯದಲ್ಲಿ ಮುಂಗಾರು ಪ್ರಾರಂಭವಾಗಿದ್ದು, ಉತ್ತಮ ಮಳೆ,ಬೆಳೆಯಾಗಿ ರಾಜ್ಯದ ಜನರು […]

You cannot copy content of this page