ವರ್ಧಂತಿ ಮಹೋತ್ಸವ,ಧಾರ್ಮಿಕ ಸಭಾ ಕಾರ್ಯಕ್ರಮ

ಕುಂದಾಪುರ:ಜಾಲಾಡಿ ಶ್ರೀನಾಗ,ಜಟ್ಟಿಗ ಸಪರಿವಾರ ದೇವಸ್ಥಾನದ ವಾರ್ಷಿಕ ವರ್ಧಂತಿ ಪೂಜಾ ಮಹೋತ್ಸವ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ದೇವಸ್ಥಾನದ ವಠಾರದಲ್ಲಿ ಶನಿವಾರ ನಡೆಯಿತು.ಶ್ರೀದೇವರ ವಾರ್ಷಿಕ ವರ್ಧಂತಿ ಮಹೋತ್ಸವ ಅಂಗವಾಗಿ ಭಜನಾ ಕಾರ್ಯಕ್ರಮ,ನಾಗದರ್ಶನ ಸೇವೆ,ಅನ್ನಸಂತರ್ಪಣೆ ಹಾಗೂ ನಾನಾ ರೀತಿಯ ಧಾರ್ಮಿಕ ಕಾರ್ಯಕ್ರಮಗಳು ಜರುಗಿತು.ಸ್ಥಳೀಯ ಮಕ್ಕಳಿಂದ ನೃತ್ಯ ಕಾರ್ಯಕ್ರಮ ನಡೆಯಿತು.ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಮ್ಮಾನ:ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಎಸ್‍ಎಸ್‍ಎಲ್‍ಲ್ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ಸ್ಥಳೀಯ ವಿದ್ಯಾರ್ಥಿಗಳಾದ ಶ್ರಾವ್ಯ ಜಿ.ದೇವಾಡಿಗ,ದೀಕ್ಷಾ ದೇವಾಡಿಗ,ಸೃಜನಾ ದೇವಾಡಿಗ,ನಿಕಿತಾ ದೇವಾಡಿಗ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ […]

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ದಾರುಣ ಸಾವು

ಕುಂದಾಪುರ:ಮನೆಯ ಗೇಟ್ ಮುಂದೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಎಂಬಲ್ಲಿ ಭಾನುವಾರ ನಡೆದಿದೆ. ಹಡವಿನಕೋಣೆ ಮುದ್ರುಮಕ್ಕಿ ಸಮೀಪದ ನಿವಾಸಿ ಕುರುಡಿ ಇರ್ಷಾದ್ (52) ಮೃತಪಟ್ಟಿದ್ದಾರೆ.ಶನಿವಾರ ತಡರಾತ್ರಿ ಸುರಿದ ಬಾರಿ ಗಾಳಿ ಮಳೆಗೆ ಹಡವಿನಕೋಣೆಯಿಂದ ಮುದ್ರುಮಕ್ಕಿಗೆ ತೆರಳುವ ಮಾರ್ಗದಲ್ಲಿದ್ದ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು.ಇರ್ಷಾದ್ ಅವರು ಮನೆಯೊಳಕ್ಕೆ ಸತ್ತುಹೋದ ಇಲಿಯನ್ನು ಹೊರಕ್ಕೆ ಬೀಸಾಡುವ ಸಲುವಾಗಿ ಬೆಳಿಗ್ಗೆ ಗೇಟ್ ಹೊರಕ್ಕೆ ಬಂದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ […]

ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಬಿ.ಸಿ.ಎ ವಿಭಾಗದ ವತಿಯಿಂದವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು.ಪ್ರೊ.ರಾಜಲಕ್ಷ್ಮೀ ಆನಂದನ್ಸೆಂಟರ್ ಹೆಡ್,ಸ್ಕೂಲ್ ಆಫ್ ಐಟಿ ಸ್ಕಿಲ್ಸ್ ಮಣಿಪಾಲ್,ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್, ಮಣಿಪಾಲ್ ಇವರು ವಿದ್ಯಾರ್ಥಿಗಳಿಗೆ ಬಿ.ಸಿ.ಎ ಕೋರ್ಸ್ ಉಪಯೋಗ ಮತ್ತು ಭವಿಷ್ಯದಲ್ಲಿ ಸಿಗುವ ಉದ್ಯೋಗದ ಮಾಹಿತಿ ಹಾಗೂ ಸಂದರ್ಶನವನ್ನು ಹೇಗೆ ಎದುರಿಸಬೇಕು ಎನ್ನುವುದರ ಕುರಿತು ಮತ್ತು ಹೊಸ ಬಗೆಯ ಕಂಪ್ಯೂಟರ್ ಅಪ್ಲಿಕೇಶನ್ ತಯಾರಿಸುವ ಕುರಿತು ಮಾಹಿತಿ ನೀಡಿದರು.ಕಾಲೇಜಿನ ಸಂಸ್ಥಾಪಕ ಅಧ್ಯಕ್ಷರಾದ ಸುಬ್ರಮಣ್ಯ ಬಿ.ಸಿ.ಎ ವಿಭಾಗದ ಮಹತ್ವದ ಕುರಿತು ‌ಮಾಹಿತಿಯನ್ನು ನೀಡಿದರು.ಕಾಲೇಜಿನ […]

You cannot copy content of this page