ಏಕಪವಿತ್ರ ನಾಗಮಂಡಲೋತ್ಸವ ಸಂಪನ್ನ
ಕುಂದಾಪುರ:ಆದಿ ಸುಬ್ರಹ್ಮಣ್ಯ ದೇವಸ್ಥಾನ ವಂಡಾರು ಇದರ ವಾರ್ಷಿಕೋತ್ಸವ ಅಂಗವಾಗಿ ಶ್ರೀ ದೇವರಿಗೆ ಬ್ರಹ್ಮಕಲಶಾಭಿಷೇಕ ಸಹಿತವಂಡಾರು ಬಾಯರಿ ಕುಟುಂಬಸ್ಥರಿಂದ ಏಕಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶುಕ್ರವಾರ ವಂಡಾರುನಲ್ಲಿ ವಿಜೃಂಭಣೆಯಿಂದ ನಡೆಯಿತು. ನಾಗಮಂಡಲೋತ್ಸವ ಕಾರ್ಯಕ್ರಮದ ಅಂಗವಾಗಿ ಹಾಲಿಟ್ಟು ಸೇವೆ, ಸಾರ್ವಜನಿಕ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು.ಸಾವಿರಾರು ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಶ್ರೀ ಆದಿ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ಪ್ರಸಾದವನ್ನು ಸ್ವೀಕರಿಸಿದರು.ಶೃಂಗೇರಿ ಶಾರದಾ ಪೀಠದ ದಕ್ಷಿಣ ಪ್ರಾಂತೀಯ ಧರ್ಮಾಧಿಕಾರಿ ವೇದ ಮೂರ್ತಿ ನಾಗಪಾತ್ರಿಗಳಾದ ಲೋಕೇಶ್ ಅಡಿಗ ಬಡಾಕೆರೆ […]