NATA ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳೊಂದಿಗೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಹೆಮ್ಮಾಡಿ ಜನತಾ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್.

ಹೆಮ್ಮಾಡಿ:ರಾಷ್ಟ್ರೀಯ ಮಟ್ಟದಲ್ಲಿ ನಡೆದ NATA ಪ್ರವೇಶ ಪರೀಕ್ಷೆ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್,ಪರೀಕ್ಷೆ ಬರೆದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ 161 ಅಂಕಗಳನ್ನು ಪಡೆದು, ಅದ್ವಿತೀಯ ಸಾಧನೆ ಮಾಡುವುದರ ಮೂಲಕ ಅರ್ಹತೆ ಪಡೆದಿದ್ದು ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿ ಮೂಡಿ ಬಂದಿದ್ದಾಳೆ.ಉಳಿದಂತೆಕಾಲೇಜಿನ ವಿದ್ಯಾರ್ಥಿನಿಯರಾದ ಉನ್ನತಿ ಗೌಡ 113 ಅಂಕಗಳು ಹಾಗೂ ವರ್ಣಾ ಆಚಾರ್ 113 ಅಂಕಗಳನ್ನು ಪಡೆದು ಸಾಧನೆ ಮೆರೆದಿರುತ್ತಾರೆ.ಕಾಲೇಜು ಪ್ರಾರಂಭದ ದ್ವಿತೀಯ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದ ವಿದ್ಯಾರ್ಥಿನಿಯರು ಇವರಾಗಿದ್ದು,ಗ್ರಾಮೀಣ […]

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,ಬೆಳ್ತಂಗಡಿಯಲ್ಲಿ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ಶಾಸಕ ಕೆ.ವಸಂತ ಬಂಗೇರ (79) ಮೇ 8 ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ಅವರ ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿದ್ದು,ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.ಇದೀಗ ಅವರು ಕೊನೆಯು ಸಿರೆಳೆದಿದ್ದು, ಮೇ 9ರಂದು ಮುಂಜಾನೆ ಪಾರ್ಥಿವ ಶರೀರ […]

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಒತ್ತಡ ನಿರ್ವಹಣೆ ಕುರಿತು ಕಾರ್ಯಕ್ರಮ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದಿಂದ ವತಿಯಿಂದ ಒತ್ತಡ ನಿರ್ವಹಣೆ ಎನ್ನುವ ವಿಚಾರದ ಕುರಿತು ಕಾರ್ಯಕ್ರಮ ನಡೆಯಿತು.ಡಾ ಎ.ವಿ ಬಾಳಿಗಾ ಆಸ್ಪತ್ರೆ ಉಡುಪಿ ಆಪ್ತ ಸಮಾಲೋಚಕಿ ಪದ್ಮರಾಘವೇಂದ್ರ ಅವರು ವಿದ್ಯಾರ್ಥಿಗಳಿಗೆ ಒತ್ತಡ,ಖಿನ್ನತೆ ನಿರ್ವಹಣೆಯ ಕುರಿತಾಗಿ ಹಾಗೂ ಮಾನಸಿಕ ಒತ್ತಡ, ಹಿಡಿತ ಶೈಕ್ಷಣಿಕವಾಗಿ ಕ್ಷೇತ್ರದಲ್ಲಿ ಮನಸ್ಥಿತಿಯನ್ನು ಹೇಗೆ ಹಿಡಿತದಲ್ಲಿ ಇಟ್ಟುಕೊಳ್ಳಬೇಕು ಎಂಬುವ ಕುರಿತು ಅರಿವು ಮೂಡಿಸಿದರು.ಕಾಲೇಜಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ ಅವರು ಮಾತನಾಡಿ,ಶಿಸ್ತು ಸಮಯ ಪಾಲನೆಯ ಕುರಿತಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.ಕಾಲೇಜಿನ ನಿರ್ದೇಶಕಿ […]

You cannot copy content of this page