ಕುಂದಾಪುರ ನಾಗ ಬೊಬ್ಬರ್ಯ ದೇವಸ್ಥಾನದಲ್ಲಿ ನಾಗಮಂಡಲೋತ್ಸವ ಸಂಪನ್ನ

ಕುಂದಾಪುರ:ದಿ.ಜಿ.ಕಮಲ ಮತ್ತು ಜಿ.ಸುಬ್ಬಣ್ಣ ಶೇರೆಗಾರರ ಮನೆಯವರಿಂದ ಚತುಃಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಶ್ರೀ ನಾಗ ಬೊಬ್ಬರ್ಯ ದೇವಸ್ಥಾನ ಕುಂದಾಪುರದ ಮೂಡುಕೇರಿಯಲ್ಲಿ ನಡೆಯಿತು.ಚತುಃಪವಿತ್ರ ನಾಗಮಂಡಲೋತ್ಸವ ಅಂಗವಾಗಿ ಮಹಾಅನ್ನಸಂತರ್ಪಣೆ,ನಾಗಮಂಡಲ ಸೇವೆ ಜರುಗಿತು.ಸಾವಿರಾರರು ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಶ್ರೀದೇವರ ಪ್ರಸಾದವನ್ನು ಸ್ವೀಕಾರ ಮಾಡಿದರು.ಶೃಂಗೇರಿ ಶ್ರೀ ಶಾರದಾ ಪೀಠದ ಪ್ರಾಂತೀಯ ಧರ್ಮಾಧಿಕಾರಿಗಳಾದ ವೇದಮೂರ್ತಿ ಬಿ.ಲೋಕೇಶ್ ಅಡಿಗ ಬಡಾಕೆರೆ ಅವರು ನಾಗದರ್ಶನ ಸೇವೆಯನ್ನು ನೆರವೇರಿಸಿದರು.ಅಸಂಖ್ಯಾ ಭಕ್ತರು ಮಂಡಲ ಸೇವೆಯನ್ನು ಕಣ್ತುಂಬಿಕೊಂಡರು.ಹೂ ಹಣ್ಣು ಹಂಪಲುಗಳಿಂದ ಮಂಡಲದ ಚಪ್ಪರವನ್ನು ಸಿಂಗಾರ ಮಾಡಲಾಗಿತ್ತು.ನಾರಾಯಣ […]

ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆ ಗಂಗೊಳ್ಳಿ:ಗಣರಾಜ್ಯೋತ್ಸವ ಸಂಭ್ರಮಾಚರಣೆ

ಕುಂದಾಪುರ:ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆ ಗಂಗೊಳ್ಳಿಯಲ್ಲಿ 76ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಭಾನುವಾರ ಆಚರಿಸಲಾಯಿತು.ಗಂಗೊಳ್ಳಿ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಧ್ವಜಾರೋಹಣ ಗೈದು ಮಾತನಾಡಿ, ಗಣರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು. ಶಾಲಾ ಮುಖ್ಯೋಪಾಧ್ಯಾಯನಿ ಭಗಿನಿ ಅಧ್ಯಕ್ಷತೆ ವಹಿಸಿದ್ದರು. ಕ್ರೆಸೆನ್ಸ್,ಶಿಕ್ಷಕ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಭಾಷಣ, ದೇಶಭಕ್ತಿ ಗೀತೆಯ ಸಮೂಹ ಗಾಯನ, ನೃತ್ಯ ಕಾರ್ಯಕ್ರಮ ಜರುಗಿತು. ಹತ್ತನೇ ತರಗತಿ ವಿದ್ಯಾರ್ಥಿನಿ ಶ್ರೀನಿಧಿ ಖಾರ್ವಿ ಗಣ್ಯರನ್ನು ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ರೀತೇಶ್ ವಂದಿಸಿದರು.

ಶಿಕ್ಷಕ ಉದಯ ಕುಮಾರ್ ಶೆಟ್ಟಿಗೆ ರಾಜ್ಯಪಾಲರಿಂದ ಪುರಸ್ಕಾರ

ಕುಂದಾಪುರ:ಕರ್ನಾಟ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳೂರಿನ ಟೌನ್ ಹಾಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಂದಾಪುರ ತಾಲೂಕಿನ ಬೈಂದೂರು ವಲಯದ ಆಲೂರು ಸರಕಾರಿ ಪ್ರೌಢಶಾಲೆಯ ಶಿಕ್ಷಕ ಉದಯ ಕುಮಾರ್ ಶೆಟ್ಟಿ ಅವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಮತದಾರ ಸಾಕ್ಷರತಾ ಕ್ಲಬ್ ಸಂಚಾಲಕ ಪುರಸ್ಕಾರವನ್ನು ನೀಡಿ ಗೌರವಿಸಿದರು.ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ ಮೀನಾ,ಬಿ.ಬಿ.ಎಂ.ಪಿ ಆಯುಕ್ತ ತುಷಾರ ಗಿರಿನಾಥ್ ಉಪಸ್ಥಿತರಿದ್ದರು.

You cannot copy content of this page