ಶ್ರೀಧರ್ಮಸ್ಥಳ ಮೇಳದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ನಿಧನ

ಕುಂದಾಪುರ:ಶ್ರೀಧರ್ಮಸ್ಥಳ ಯಕ್ಷಗಾನ ಮೇಳದಲ್ಲಿ 42 ವರ್ಷಗಳ ಕಾಲ ತಿರುಗಾಟ ನಿರ್ವಹಿಸಿದ ಹಿರಿಯ ಸವ್ಯಸಾಚಿ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು (64) ನಿಧನಾಗಿದ್ದಾರೆ.ಮೇ 1 ರಂದು ಕೋಟ ಗಾಂಧಿ ಮೈದಾನದಲ್ಲಿ ನಡೆದ ಧರ್ಮಸ್ಥಳ ಕ್ಷೇತ್ರ ಮಹಾತ್ಮೆಯ ಯಕ್ಷಗಾನ ಬಯಲಾಟ ಕಾರ್ಯಕ್ರಮದಲ್ಲಿ ಕುಕ್ಕಿತ್ತಾಯನ ವೇಷ ನಿರ್ವಹಿಸಿ, ಚೌಕಿಗೆ ಮರಳಿ ಕಿರೀಟ ಆಭರಣಗಳನ್ನು ತೆಗೆದಿಟ್ಟು ಮುಖದ ಬಣ್ಣ ತೆಗೆಯುತ್ತಿದ್ದ ಹಾಗೆ ತೀವ್ರ ಹೃದಯಾಘಾತದಿಂದ ಅವರು ನಿಧನರಾಗಿದ್ದಾರೆ.ಯಾವುದೇ ಪಾತ್ರ ನೀಡಿದರೂ ಸಮರ್ಥ ರೀತಿಯಲ್ಲಿ ನಿರ್ವಹಿಸುತ್ತಿದ್ದ ಹಿರಿಯ ಸವ್ಯಸಾಚಿ ಕಲಾವಿದರು.

ತ್ರಾಸಿ,ಗಂಗೊಳ್ಳಿ,ಗುಜ್ಜಾಡಿ ಭಾಗದಲ್ಲಿ ಶಾಸಕ ಕಿರಣ್ ಕೊಡ್ಗಿ ಮತ ಶಿಕಾರಿ

ಬೈಂದೂರು:ಕುಂದಾಪುರ ಶಾಸಕ ಕಿರಣ್ ಕೊಡ್ಗಿ ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ತ್ರಾಸಿ,ಗಂಗೊಳ್ಳಿ ಪರಿಸರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರ ಪ್ರಚಾರ ನಡೆಸಿದರು.ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಿಂದಲೇ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಒಂದು ಲಕ್ಷಕ್ಕೂ ಅಧಿಕ ಲೀಡ್ ನೀಡುವ ಸಂಕಲ್ಪವನ್ನು ಈಗಾಗಲೇ ಶಾಸಕರಾದ ಗುರುರಾಜ ಗಂಟಿಹೊಳೆಯವರು ಮಾಡಿದ್ದಾರೆ.ಅದನ್ನು ಈಡೇರಿಸುವ ನಿಟ್ಟಿನಲ್ಲಿ ನಾವೆಲ್ಲರೂ ಒಟ್ಟಾಗಿ ಈ ಚುನಾವಣೆ ಯಜ್ಞದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದರು.ಕಳೆದ ಹತ್ತು ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಮಾಡಿರುವ […]

ಮೇ 3 ರಂದು ಅಣ್ಣಾಮಲೈ, ಬಿ.ವೈ ರಾಘವೇಂದ್ರ ಅವರಿಂದ ಬೃಹತ್ ರೋಡ್ ಶೋಬೈಕ್ ರ‍್ಯಾಲಿ*

ಬೈಂದೂರು:ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಚುನಾವಣ ಪ್ರಚಾರ ಕಾರ್ಯ ಶರವೇಗದಲ್ಲಿ ಸಾಗುತ್ತಿದ್ದು ಮೇ 3 ರಂದು ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿ ಬೃಹತ್ ರೋಡ್ ಶೋ ಆಯೋಜಿಸಲಾಗಿದೆ.ಮೇ 3ರ ಬೆಳಗ್ಗೆ 9.30ಕ್ಕೆ ಕೊಲ್ಲೂರಿನಲ್ಲಿ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರು ರೋಡ್ ಶೋ ಗೆ ಚಾಲನೆ ನೀಡಲಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ,ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಭಾಗವಹಿಸಲಿದ್ದಾರೆ.ಕೊಲ್ಲೂರಿಂದ ರೋಡ್ ಶೋ ಆರಂಭವಾಗಿ ವಂಡ್ಸೆ, ನೇರಳಕಟ್ಟೆ,ತಲ್ಲೂರು ವರೆಗೂ ತಲುಪಲಿದೆ.ಮಧ್ಯಾಹ್ನ ಬೈಂದೂರು ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ರೋಡ್ ಶೋ […]

You cannot copy content of this page