ಬೂತ್ ಗೆದ್ದರೆ ಕ್ಷೇತ್ರ ಗೆದ್ದಂತೆ:ಮಾಜಿ ಶಾಸಕ ರಘುಪತಿ ಭಟ್
ಬೈಂದೂರು:ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರನ್ನು ದಾಖಲೆಯ ಮತಗಳ ಅಂತರದಲ್ಲಿ ಗೆಲ್ಲಿಸಲು ಬೈಂದೂರಿನಿಂದಲೇ ಒಂದು ಲಕ್ಷಕ್ಕೂ ಅಧಿಕ ಲೀಡ್ ಕೊಡಿಸುವಲ್ಲಿ ಪೇಜ್ ಪ್ರಮುಖರ ಪಾತ್ರ ಬಹಳ ಮಹತ್ವದ್ದಾಗಿದೆ ಎಂದು ಉಡುಪಿ ಮಾಜಿ ಶಾಸಕರಾದ ಕೆ.ರಘುಪತಿ ಭಟ್ ಹೇಳಿದರು.ಶಿರೂರು ಮಾತ್ರಶ್ರೀ ಸಭಾಭವನದಲ್ಲಿ ಶನಿವಾರ ನಡೆದ ಉಪ್ಪುಂದ ಮಹಾಶಕ್ತಿ ಕೇಂದ್ರದ ಪೇಜ್ ಪ್ರಮುಖ್ ಸಭೆಯಲ್ಲಿ ಅವರು ಮಾತನಾಡಿದರು.ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಕೈಗೊಂಡಿರುವ ಬೂತ್ ಕಡೆಗೆ ಸಮೃದ್ಧ ನಡಿಗೆ ಮೂಲಕ ಈಗಾಗಲೇ ಎಲ್ಲ ಬೂತ್ ಗಳನ್ನು […]



























































































































































































































































































































































































































































































































































































































































































































































































































































































































































































































































































































































































































































































































































































































































































