ಈಶ್ವರಪ್ಪ ಅವರಿಗೆ ನೀಡಿದ ಬೆಂಬಲ ವಾಪಾಸ್-ಬಿ.ವೈ ರಾಘವೇಂದ್ರಪರ ಪ್ರಚಾರ ಶ್ರೀಧರ ಬಿಜೂರು
ಬೈಂದೂರು:ಕೆ.ಎಸ್.ಈಶ್ವರಪ್ಪ ಅವರು ಬಿಜೆಪಿ ಮತಗಳನ್ನು ಟಾರ್ಗೆಟ್ ಮಾಡಿ,ಕಾಂಗ್ರೆಸ್ ಗೆಲ್ಲಿಸುವ ಮಾನಸಿಕತೆಯಲ್ಲಿದ್ದದ್ದು ನಮಗೆ ಅರಿವಿಗೆ ಬಂದಿದೆ.ಹೀಗಾಗಿಯೇ ರಾಷ್ಟ್ರಭಕ್ತರಾದ ನಾವೆಲ್ಲರೂ ಪ್ರಧಾನಿ ಮೋದಿಯವರಿಗೆ ಬೆಂಬಲ ನೀಡುತ್ತೇವೆ ಮತ್ತು ಬೈಂದೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರವಾಗಿ ಕೆಲಸ ಮಾಡಲಿದ್ದೇವೆ.ಈಶ್ವರಪ್ಪ ಅವರಿಗೆ ನೀಡಿದ ಬೆಂಬಲವನ್ನು ವಾಪಾಸ್ ಪಡೆದಿದ್ದೇವೆ ಎಂದು ರಾಷ್ಟ್ರಭಕ್ತರ ಬಳಗದ ಶ್ರೀಧರ್ ಬಿಜೂರ್ ಹೇಳಿದರು.ಬೈಂದೂರು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರೊಂದಿಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಕಾರ್ಯಕರ್ತರ ಕಡೆಗಣನೆ ಆಗುತ್ತಿದೆ […]





























































































































































































































































































































































































































































































































































































































































































































































































































































































































































































































































































































































































































































































































































































































































































