ಉಪ್ಪುಂದ ಶ್ರೀ ಉಮಾಮಹೇಶ್ವರ ದೇವರ ಪುನರ್‍ಪ್ರತಿಷ್ಠೆ,ಶಿಲಾಮಯ ಮಂದಿರ ಲೋಕಾರ್ಪಣೆ
ಕುಂದಾಪುರ:ಉಪ್ಪುಂದ ಮಾದಯ್ಯ ಶೆಟ್ರಮನೆ ಮೂಲಸ್ಥಾನದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಶಿಲಾಮಯ ಮಂದಿರ ಲೋಕಾರ್ಪಣೆ ಹಾಗೂ ಶ್ರೀ ಉಮಾಮಹೇಶ್ವರ,ಶ್ರೀ ನಂದಿಕೇಶ್ವರ ಹಾಗೂ ಪರಿವಾರ ದೇವತೆಗಳ ಪುನರ್ ಪ್ರತಿಷ್ಠಾಪನೆ,ನೂತನ ಯಾಗಮಂಟಪದಲ್ಲಿ ನವಗ್ರಹ ಮೂರ್ತಿಗಳ ಸ್ಥಾಪನೆ ಮತ್ತು ಶ್ರೀ ಉಮಾಮಹೇಶ್ವರ ಜ್ಞಾನಪಂಟಪಗಳನ್ನೊಳಗೊಂಡ ನೂತನ ರಾಜಗೋಪುರ ಸಮರ್ಪಣೆ ಕಾರ್ಯಕ್ರಮ ತತ್ಕರಕಮಲಸಂಜಾತರಾದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳವರ ದಿವ್ಯ ಉಪಸ್ಥಿತಿಯಲ್ಲಿ ಸೋಮವಾರ ನಡೆಯಿತು.ದಕ್ಷಿಣಾಮ್ನಾಯ ಶ್ರೀ ಶೃಂಗೇರಿ ಶಾರದಾಪೀಠಾಧೀಶ್ವರರಾದ ಜಗದ್ಗುರು ಶ್ರೀ ವಿಧುಶೇಖರಭಾರತೀ ಮಹಾಸ್ವಾಮಿಗಳನ್ನು ಭವ್ಯ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಯಿತು.ಸ್ವಾಮಿಗಳ ಪಾದ ಪೂಜೆಯನ್ನು ನೆರವೇರಿಸಲಾಯಿತು.ಸ್ವಾಮಿಗಳು […]