ಗಾಳಿ ಅಬ್ಬರಕ್ಕೆ ಧರೆಗುರುಳಿದ ವಿದ್ಯುತ್ ಕಂಬ:50 ಕ್ಕೂ ಹೆ0ಚ್ಚು ಕಂಬಕ್ಕೆ ಹಾನಿ

ಕುಂದಾಪುರ:ಏಕಏಕಿ ಶನಿವಾರ ಸಂಜೆ ಬೀಸಿದ ಭಾರಿ ಗಾಳಿಗೆ ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗೆ ಒಳಪಟ್ಟಿರುವ ತಲ್ಲೂರು ಉಪವಿಭಾಗದ ವ್ಯಾಪ್ತಿಯಲ್ಲಿನ ಹೆಮ್ಮಾಡಿ,ದೇವಲ್ಕುಂದ,ಆಲೂರು,ಬಡಾಕೆರೆ,ಗಂಗೊಳ್ಳಿ ಸೇರಿದಂತೆ ನಾನಾ ಕಡೆಗಳಲ್ಲಿ ಒಟ್ಟು 45 ರಿಂದ 50 ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿ ಬಿದ್ದು ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿತ್ತು.

ಸ್ಮಶಾನಕ್ಕೆ ದಾರಿ ಕಲ್ಪಿಸುವಂತೆ ಆಗ್ರಹಿಸಿ ಗುಜ್ಜಾಡಿ ಪಂಚಾಯಿತಿ ಎದುರು ಆಹೋರಾತ್ರಿ ಧರಣಿ ಸತ್ಯಾಗ್ರಹ

ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚುಗೋಡು ಸನ್ಯಾಸಿಬಲ್ಲೆ ಸ್ಮಶಾನ ಹಾಗೂ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಅನಾದಿ ಕಾಲದ ರಸ್ತೆಯನ್ನು ಖಾಸಗಿ ಜಾಗದ ಮಾಲೀಕರು ಬಂದ್ ಮಾಡಿರುವುದನ್ನು ವಿರೋಧಿಸಿ.ಸಾರ್ವಜನಿಕ ಸ್ಮಶಾನವನ್ನು ಧ್ವಂಸ ಮಾಡಿದ್ದಾರೆ ಎಂದು ಆರೋಪಿಸಿ ಕಂಚುಗೋಡು ಸನ್ಯಾಸಿ ಬಲ್ಲೆ ಗ್ರಾಮಸ್ಥರು ಗುಜ್ಜಾಡಿ ಗ್ರಾಮ ಪಂಚಾಯಿತಿ ಎದುರುಗಡೆ ಅಹೋರಾತ್ರಿ ಧರಣಿ ಸತ್ಯಾಗ್ರಹದ ಮೂಲಕ ಪ್ರತಿಭಟನೆಯನ್ನು ಶುಕ್ರವಾರ ನಡೆಸಿದರು.ಸ್ಮಶಾನ ಸಂಪರ್ಕಕ್ಕೆ ದಾರಿ ಕಲ್ಪಿಸುವುದರ ಜತೆಗೆ ತಪ್ಪಿತಸ್ಥರ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.ಸುಮಾರು ಎರಡು ಶತಮಾನಕ್ಕೂ ಹೆಚ್ಚು ಕಾಲ […]

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ ಸಹಕಾರ ಇಲಾಖೆ ಉಡುಪಿ ಜಿಲ್ಲೆ ವತಿಯಿಂದ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ ಕಾರ್ಯಕ್ರಮದ ಅಂಗವಾಗಿ ಪರಿಸರ ಸ್ವಚ್ಛತೆ ಮತ್ತು ಗಿಡ ನೆಡುವ ಕಾರ್ಯಕ್ರಮ ಮರವಂತೆಯಲ್ಲಿ ನಡೆಯಿತು.ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಾಜಿ ವ್ಯವಸ್ಥಾಪಕ ಎಸ್.ವಿಶ್ವಂಬರ ಐತಾಳ್ ಗಿಡ ನೆಡುವ ಮೂಲಕ ಚಾಲನೆ ನೀಡಿದರು.ಸಂಘದ ಅಧ್ಯಕ್ಷೆ ಕಮಲಾಕ್ಷಿ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು,ಉಪಾಧ್ಯಕ್ಷೆ ವನಿತಾ ಖಾರ್ವಿ,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಶ್ರೀನಿವಾಸ […]

You cannot copy content of this page