ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ ನಿರ್ದೇಶಕರಾಗಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸೇನಾಪುರ ಗ್ರಾಮದ ಸುರೇಂದ್ರ ಗುಡ್ಡೆಹೋಟೆಲ್ ನಾಡ ಅವರು ಆಯ್ಕೆಯಾಗಿದ್ದಾರೆ.ಸಂಸ್ಥಾಪಕ ಅಧ್ಯಕ್ಷ ಡಾ.ವಿ.ಟಿ ವೆಂಕಟೇಶಯ್ಯ ಅವರು ಪ್ರಮಾಣ ಪತ್ರವನ್ನು ಹಸ್ತಾಂತರಿಸಿದರು.ಅಧ್ಯಕ್ಷೆ ಸುಮಿತ್ರ ಮಾರುತಿ ದುರ್ಗಿ,ಉಪಾಧ್ಯಕ್ಷ ಬಸವರಾಜು ಹಟ್ಟಿಹೊಳಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಸುರೇಂದ್ರ ಗುಡ್ಡೆಹೋಟೆಲ್ ಅವರು ಪ್ರಸ್ತುತ ಶ್ರೀ ಸಿದ್ದಲಿಂಗೇಶ್ವರ ಕನ್ನಡ ಪ್ರೌಢಶಾಲೆಯಲ್ಲಿ (ಮಾಗಡಿ ರಸ್ತೆ ಬೆಂಗಳೂರು ದಕ್ಷಿಣ ಜಿಲ್ಲೆ) ಅಧ್ಯಾಪಕರಾಗಿ […]

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು ದೇವಸ್ಥಾನಗಳ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಅವರ ಮುಂದಾಳತ್ವದಲ್ಲಿ ಜರುಗಿದೆ.ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ನಿರಂತರವಾಗಿ ಸೇವೆ ಸಲ್ಲಿಸಿದ ಅಪ್ಪಣ್ಣ ಹೆಗ್ಡೆ ಅವರು ಎಲ್ಲರಿಗೂ ಚಿರಪರಿಚಿತರು.ಅಪ್ಪಣ್ಣ ಹೆಗ್ಡೆ ನಿಧನದಿಂದ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ.

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು ಬಳಗವನ್ನು ಅಗಲಿದ್ದಾರೆ.ಪಂಚಗಂಗಾವಳಿ ಸೊಸೈಟಿ ಸ್ಥಾಪಕಾಧ್ಯಕ್ಷರಾಗಿ,ತ್ರಾಸಿ ಹೊಸಾಡು ಗುಜ್ಜಾಡಿ ಸಂಘದ ಸ್ಥಾಪಕಾಧ್ಯಕ್ಷರಾಗಿಯೂ, ಪಂಚಾಂಗ ಸೊಸೈಟಿ ಹೆಮ್ಮಾಡಿ ಅದರ ಅಧ್ಯಕ್ಷರಾಗಿಯೂ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.ಎಲ್ಲಾ ಸಮುದಾಯದ ಜನರ ಮೆಚ್ಚುಗೆಗೆ ಪಾತ್ರರಾಗಿರುವ ರಾಜು ದೇವಾಡಿಗ ತ್ರಾಸಿ ಅವರ ಸಾವು ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ದೇವಾಡಿಗ ಸಮಾಜದ ಮುಖಂಡರು ತಿಳಿಸಿದ್ದಾರೆ.

You cannot copy content of this page