ಶ್ರೀ ನಿಜಶರಣ ಅಂಬಿಗರ ಚೌಡಯ್ಯ,ಜಗದ್ಗುರು ಶ್ರೀಶಾಂತ ಭೀಷ್ಮ ಚೌಡಯ್ಯ ಮಹಾಸ್ವಾಮಿಗಳಿಗೆ ಅದ್ದೂರಿ ಸ್ವಾಗತ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ಶ್ರೀರಾಮ ದೇವಸ್ಥಾನದ ಸುವರ್ಣ ಮಹೋತ್ಸವ ಅಂಗವಾಗಿ ಶ್ರೀರಾಮ ದೇವಸ್ಥಾನದಲ್ಲಿ ವಿಷ್ಣು ಸಹಸ್ರನಾಮ ಹೋಮ,ಭಜನಾ ಕಾರ್ಯಕ್ರಮ,ಅನ್ನಸಂತರ್ಪಣೆ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸೋಮವಾರ ನಡೆಯಿತು.ಶ್ರೀನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ ನರಸೀಪುರ ಹಾವೇರಿ ಜಗದ್ಗುರು ಶ್ರೀಶಾಂತ ಭೀಷ್ಮ ಚೌಡಯ್ಯ ಮಹಾಸ್ವಾಮಿಗಳು ಅವರನ್ನು ತ್ರಾಸಿ ಸರ್ಕಲ್‍ನಿಂದ ಶ್ರೀರಾಮ ದೇವಸ್ಥಾನದ ವರೆಗೆ ಪೂರ್ಣ ಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರು,ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷರು ಮತ್ತು ಗೌರವಾಧ್ಯಕ್ಷರು,ಮಹಿಳಾ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು,ಗ್ರಾಮಸ್ಥರು ಉಪಸ್ಥಿತರಿದ್ದರು.

ನೂರು ಬೂತ್ ನಲ್ಲಿ ನೂರಾರು ಅನುಭವ,ಶಾಸಕರ ಬೂತ್ ಕಡೆಗೆ ಸಮೃದ್ಧ ನಡಿಗೆ ಶತ ಸಂಭ್ರಮ

ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು ಬೈಂದೂರು ವಿಧಾನಸಭಾ ಕ್ಷೇತ್ರದಿಂದಲೇ 1 ಲಕ್ಷಕ್ಕೂ ಅಧಿಕ ಲೀಡ್ ಪಡೆದು ಬಹುದೊಡ್ಡ ಅಂತರದಲ್ಲಿ ಜಯ ಸಾಧಿಸಬೇಕು ಎಂಬ ಛಲದೊಂದಿಗೆ ಜನಪ್ರಿಯ ಶಾಸಕರಾದ ಗುರುರಾಜ ಗಂಟೆಹೊಳೆ ಯವರು ಆರಂಭಿಸಿದ ಬೂತ್ ಕಡೆಗೆ ಸಮೃದ್ಧ ನಡೆಗೆ ಒಂದು ವಾರದಲ್ಲಿಯೇ ನೂರು ಬೂತ್ ಗಳಲ್ಲಿ ಸಂಚಲನ ಮೂಡಿಸಿದೆ.ಬಿ.ವೈ.ರಾಘವೇಂದ್ರ ಅವರು ಬೈಂದೂರಿನಲ್ಲಿ ಒಂದು ಲಕ್ಷ ಲೀಡ್ ಪಡೆದು ವಿಜಯಶಾಲಿಯಾಗುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸುವುದರೊಂದಿಗೆ ಅವರನ್ನು ಬೈಂದೂರಿಗೆ […]

ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ (ಶುಭದಾ ಆಂಗ್ಲ ಮಾಧ್ಯಮ ಶಾಲೆ) ಕಿರಿಮಂಜೇಶ್ವರ ಶುಭಾರಂಭ,ಬೇಸಿಗೆ ಶಿಬಿರ ಉದ್ಘಾಟನೆ

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ (ಶುಭದಾ ಆಂಗ್ಲ ಮಾಧ್ಯಮ ಶಾಲೆ) ಸಮರ್ಪಣಾ ಟ್ರಸ್ಟ್ ಹೆಮ್ಮಾಡಿ ನೂತನ ಆಡಳಿತ ಮಂಡಳಿ ಯೊಂದಿಗೆ ಶಾಲೆಯ ಶುಭಾರಂಭ ಮತ್ತು ಚಿಣ್ಣರ ಬೇಸಿಗೆ ಶಿಬಿರ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ಶುಭದಾ ಆಂಗ್ಲ ಮಾಧ್ಯಮ ಶಾಲಾ ವಠಾರದಲ್ಲಿ ಅದ್ದೂರಿಯಾಗಿ ಸೋಮವಾರ ನಡೆಯಿತು.ನಿವೃತ್ತ ಪ್ರಾಧ್ಯಾಪಕರಾದ ಎಸ್.ಜನಾರ್ದನ ಮರವಂತೆ ಅವರು ಒಳಂಗಾಣ ಕ್ರೀಡಾಂಗಣವನ್ನು ಉದ್ಘಾಟಿಸಿ ಮಾತನಾಡಿ,ಹೊಸ ವಿನ್ಯಾಸದೊಂದಿಗೆ ಆರಂಭಗೊಂಡಿರುವ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‍ನಲ್ಲಿ ಎಲ್ಲಾ ರೀತಿಯ ವ್ಯವಸ್ಥೆಗಳನ್ನು […]

You cannot copy content of this page