ಶ್ರೀಶಾರದಾ ಸದ್ವಿದ್ಯಾ ವಸಂತ ಶಿಬಿರ ಉದ್ಘಾಟನೆ
ಕುಂದಾಪುರ:ಮಕ್ಕಳಿಗೆ ಸಂಸ್ಕಾರವನ್ನು ಕೊಡದೆ ಕೇವಲ ಜ್ಞಾನವನ್ನು ಮಾತ್ರ ನೀಡಿದರೆ ಪ್ರಯೋಜನ ಶೂನ್ಯವಾಗಿದೆ.ವಿದ್ಯೆ ಜತೆಗೆ ಸಂಸ್ಕಾರ ನೀಡಿದಾಗ ಮಾತ್ರ ಧರ್ಮ ಉಳಿಯುತ್ತದೆ.ಮೇಕಾಲೆ ಶಿಕ್ಷಣ ಪದ್ದತಿಯಿಂದ ಇಂದು ಮಕ್ಕಳು ಸರ್ಟಿಫಿಕೇಟ್ ಶಿಕ್ಷಣವನ್ನು ಪಡೆಯಲು ಮಾತ್ರ ಸಾಧ್ಯವಾಗುತ್ತಿದೆ ಎಂದು ಹಾಲಾಡಿ ಪಂಚಾಂಗಕರ್ತರು ವಿದ್ವಾನ್ ವಾಸುದೇವ ಜೋಯಿಸರು ತಟ್ಟುವಟ್ಟು ಹೇಳಿದರು.ಬೈಂದೂರು ತಾಲೂಕಿನ ನಾವುಂದ ಬಡಾಕರೆ ಧಾರ್ಮಿಕ ಮಂದಿರದಲ್ಲಿ ಗುರುವಾರ ನಡೆದ ಶ್ರೀ ಶಾರದಾ ಸದ್ವಿದ್ಯಾ ಶಿಬಿರ ವಸಂತ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಪ್ರಾಂತೀಯ ಧರ್ಮಾಧಿಕಾರಿಗಳು ಶ್ರೀ ಶಾರದ ಪೀಠಂ ಶೃಂಗೇರಿ ವೇದ ಮೂರ್ತಿ […]





























































































































































































































































































































































































































































































































































































































































































































































































































































































































































































































































































































































































































































































































































































































































































