ಕೊಲ್ಲೂರು:ಪಿಕಪ್ ಬಸ್ ನುಡುವೆ ಪರಸ್ಪರ ಡಿಕ್ಕಿ,ಬಸ್ ಪಲ್ಟಿ

ಕುಂದಾಪುರ:ಕೊಲ್ಲೂರು ರಾಜ್ಯ ಹೆದ್ದಾರಿ ಜನ್ನಾ ಯಲು ಸಮೀಪ ಖಾಸಗಿ ಬಸ್ ಹಾಗೂ ಒಣ ಮೆಣಸು ತುಂಬಿದ್ದ ವಾಹನದ ನಡುವೆ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ.ಬಸ್ ಪಲ್ಟಿಆಗಿದ್ದ ಘಟನೆ ಬುಧವಾರ ನಡೆದಿದೆ.ಶಾಲಾ ವಿದ್ಯಾರ್ಥಿಗಳು ಸೇರಿ ಹಲವರಿಗೆ ಸಣ್ಣಪುಟ್ಟ ಗಾಯವಾಗಿದೆ.ಮೆಣಸು ತುಂಬಿದ ಪಿಕಪ್ ವಾಹನದ ಚಾಲಕ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಸ್ತೂರಿ ರಂಗನ್ ವರದಿ ಜಾರಿ ಗುಮ್ಮ:ಹಳ್ಳಿಹೊಳೆ ಗ್ರಾಮಸ್ಥರಿಂದ ಭಾರಿ ವಿರೋಧ

ಕುಂದಾಪುರ:ಕಸ್ತೂರಿ ರಂಗನ್ ವರದಿಯಿಂದ ಜನವಸತಿ ಪ್ರದೇಶಗಳನ್ನು ಕೈಬಿಡುವಂತೆ ಆಗ್ರಹಿಸಿ ಬೈಂದೂರು ತಾಲೂಕಿನ ಹಳ್ಳಿಹೊಳೆ ಗ್ರಾಮಸ್ಥರ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಬುಧವಾರ ಸುನಂದಾ ಗೇರು ಬೀಜ ಕಾರ್ಖಾನೆ ಸುಳುಗೋಡು ಚಕ್ರ ಮೈದಾನದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.ವೈಜ್ಞಾನಿಕ ಕಸ್ತೂರಿ ರಂಗನ್ ವರದಿ ವಿರೋಧಿಸಿ, ಪ್ರತಿಭಟನೆಯನ್ನುದ್ದೇಶಿಸಿ ಮಾತಾಡಿದ ಹೋರಾಟಗಾರ ಬೆಳ್ತಂಗಡಿಯ ಫಾ| ಡಾ| ಸಲೀನ್ ಜೋಸೆಫ್‌ ,ಪರಿಸರ ಸಂರಕ್ಷಣೆ ಉದ್ದೇಶದಿಂದ ಸುಪ್ರೀಂ ನಿರ್ದೇಶನದಂತೆ ಕಸ್ತೂರಿ ರಂಗನ್ ವರದಿ ಜಾರಿ ಸೂಚನೆಗಳು ಬಂದಿವೆ.ಈ ವರದಿಯಲ್ಲಿ ಜನ ವಸತಿ ಪ್ರದೇಶಗಳನ್ನು ಸಹ ಪರಿಸರ ಸೂಕ್ಷ್ಮ […]

*ಜಡ್ಕಲ್ – ಮುದೂರು: ಕಸ್ತೂರಿ ರಂಗನ್ ವರದಿಗೆ ವಿರೋಧ -ಶಾಸಕ ಗುರುರಾಜ್ ಗಂಟಿಹೊಳೆ ಗ್ರಾಮಸ್ಥರೊಂದಿಗೆ ಮಾತುಕತೆ

ಕುಂದಾಪುರ:ಕಸ್ತೂರಿ ರಂಗನ್ ವರದಿ ಅನುಷ್ಠಾನ ಮತ್ತು ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆಯ ಆತಂಕದಲ್ಲಿರುವ ಜಡ್ಕಲ್, ಮುದೂರು ಗ್ರಾಮಕ್ಕೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿದರು. ಬಳಿಕ ಅಲ್ಲಿನ ನಿವಾಸಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.ಈ ಸಂದರ್ಭ ಮಾತನಾಡಿದ ಶಾಸಕ ಗಂಟಿಹೊಳೆ,ಮೀಸಲು ಅರಣ್ಯ ಮತ್ತು ಬಫರ್ ಝೋನ್ ಪ್ರದೇಶಗಳಲ್ಲಿ ವಾಸಮಾಡುತ್ತಿರುವ ನಿವಾಸಿಗಳಿಗೆ ಕಸ್ತೂರಿ ರಂಗನ್ ವರದಿ ಅನುಷ್ಠಾನದಿಂದ ಆಗಬಹುದಾದ ಸಮಸ್ಯೆಗಳಿಗೆ ಭಯಗೊಂಡಿರುವ ಜಡ್ಕಲ್, ಮುದೂರು ಗ್ರಾಮದ ಜನರು ಈಗಾಗಲೇ ಅಸಮಾಧಾನ ಹೊರಹಾಕಿದ್ದಾರೆ.ಜೊತೆಗೆ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ ಮುಟ್ಟಿಸುವ ಮೂಲಕ […]

You cannot copy content of this page