ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಯಿಂದ ಬಡವರಿಗೆ ಒಳಿತಾಗಿದೆ:ಗೀತಾ ಶಿವರಾಜ್ ಕುಮಾರ್

ಬೈಂದೂರು: ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಯ ಸವಲತ್ತು ಪಡೆಯುವ ಪ್ರತಿಯೊಬ್ಬ ನಾಗರೀಕರೂ ಕೂಡ ಸರ್ಕಾರದ ಪಾಲುದಾರು,ಗ್ಯಾರಂಟಿ ಯೋಜನೆಯಿಂದ ಬಡವರಿಗೆ ಒಳಿತಾಗಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು. ಬೈಂದೂರು ತಾಲ್ಲೂಕಿನ ತ್ರಾಸಿ ಅಣ್ಣಪ್ಪಯ್ಯ ಸಭಾ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿ ಪ್ರದೇಶದಲ್ಲಿ ಗ್ಯಾರಂಟಿ ಯೋಜನೆಗಳ ಪೂರೈಸಲು ಮಾಸಿಕ ₹50 ಲಕ್ಷ ಹಣ ಖರ್ಚಾಗುತ್ತಿದೆ.ಇಲ್ಲಿ […]

ಶಿವಮೊಗ್ಗ ಲೋಕಸಭಾ ಚುನಾವಣೆ -ಕಾಂಗ್ರೆಸ್ ಕಾರ್ಯಕರ್ತರ ಸಭೆ

ಕುಂದಾಪುರ:ಬೈಂದೂರು ವಿಧಾನಸಭಾ ಕ್ಷೇತ್ರದ ಕಂಬದಕೋಣೆ ಗ್ರಾಮೀಣ ಕಾಂಗ್ರೆಸ್ ಘಟಕದ ವತಿಯಿಂದ ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕಂಬದಕೋಣೆಯಲ್ಲಿ ನಡೆಯಿತು.ಕಾರ್ಯಕ್ರಮಕ್ಕೂ ಮುನ್ನ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಮತ್ತು ನಟ ಶಿವರಾಜ್ ಕುಮಾರ್ ಅವರು ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ,ಬಿ.ಎಂ ಸುಕುಮಾರ್ ಶೆಟ್ಟಿ ಮತ್ತು ಇತರ ಮುಖಂಡರ ಜೊತೆ ಕಂಬದಕೋಣೆ ಗ್ರಾಮದ ಜಟಿಗೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ, ಕ್ಷೇತ್ರದೊಡೆಯನಲ್ಲಿ ಸರ್ವರ ಒಳಿತಿಗಾಗಿ ಪ್ರಾರ್ಥಿಸಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ […]

ಚಿನ್ನಾಭರಣ ಸಹಿತ, ಆರೋಪಿಗಳ ಸೆರೆ:ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ

ಕುಂದಾಪುರ:ಕುಂದಾಪುರ ತಾಲೂಕಿನ ಕೋಣಿ ಗ್ರಾಮದ ನಿವಾಸಿಯಾಗಿರುವ ಲಕ್ಷ್ಮೀ ಎಂಬುವವರ ಮನೆಯ ಗೋಡ್ರೆಜ್ ನಲ್ಲಿ ಇಟ್ಟಿದ್ದ ಸುಮಾರು 44 ಗ್ರಾಂ ತೂಕದ ಚಿನ್ನಾಭರಣವನ್ನು ಕಳವು ಗೈದಿರುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ಚಿನ್ನಾಭರಣ ಕಳವುಗೈದಿದ್ದಾರೆ.ಕಳವಾದ ಒಟ್ಟು ಚಿನ್ನಾಭರಣಗಳ ಮೌಲ್ಯ ಸುಮಾರು 1,46,000/- ರೂಗಳಾಗಬಹುದು. ಎಂಬುವುದಾಗಿ ಠಾಣೆಗೆ ನೀಡಿದ ದೂರಿನಂತೆ ದಾಖಲಾಗಿದೆ.ಪ್ರಕರಣದಲ್ಲಿನ ಆರೋಪಿ ಪತ್ತೆ ಬಗ್ಗೆ ಸ್ಥಳಿಯ ಬಾತ್ಮೀದಾರರ ಮಾಹಿತಿ ಕಲೆಹಾಕಿ,ಕುಂದಾಪುರ ಕೋಣಿ ಗ್ರಾಮದ ನಿವಾಸಿ ಆರೋಪಿಯಾದ ವಿಜಯ ಎಂಬಾತನನ್ನು ಪತ್ತೆ ಮಾಡಿ ದಸ್ತಗಿರಿ […]

You cannot copy content of this page