ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ರಾಘವೇಂದ್ರ ಭೇಟಿ

ಕುಂದಾಪುರ:ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ಕಾರ್ಯ ಆರಂಭಿಸುವ ಮುನ್ನ ಬಿ.ವೈ ರಾಘವೇಂದ್ರ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ಸನ್ನಿಧಾನಕ್ಕೆ ಮಂಗಳವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ,ತಾಯಿ ಮೂಕಾಂಬಿಕಾ ದೇವಿಯ ದರ್ಶನ ಪಡೆದರು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೆಚ್ಚಿನ ಆಯಸ್ಸು ಆರೋಗ್ಯ ಕೊಟ್ಟು ದೇಶವನ್ನು ವಿಶ್ವಗುರು ಸ್ಥಾನಕ್ಕೆ ಕೊಂಡೊಯ್ಯುವ ಅವರ ಕನಸಿಗೆ ವಿಶೇಷ ಶಕ್ತಿ ನೀಡುವಂತೆ ಹಾಗೂ ನನ್ನ ಲೋಕಸಭಾ ಅವಧಿಯಲ್ಲಿ ಜನಗಳ ಸೇವೆಯನ್ನು ಮಾಡಲು,ಅಭಿವೃದ್ಧಿ ಕಾರ್ಯಗಳನ್ನು ಶರವೇಗದಲ್ಲಿ […]

ಬೈಂದೂರು ಕ್ಷೇತ್ರದ ಜನರು ಪೊಳ್ಳು ಹಿಂದುತ್ವವಾದಿಗಳ ಮಾತನ್ನು ನಂಬಲ್ಲ- ಬಿ.ವೈ.ರಾಘವೇಂದ್ರ

ಬೈಂದೂರು:ಪಕ್ಷದ ಚೌಕಟ್ಟಿನಲ್ಲಿ ಪಕ್ಷವೇ ಘೋಷಣೆ ಮಾಡಿದ ಅಭ್ಯರ್ಥಿ ಚುನಾವಣಾ ಅಖಾಡದಲ್ಲಿ ಇರುವಾಗ ಬೇರೊಬ್ಬ ವ್ಯಕ್ತಿ ಏನನ್ನು ಹೇಳಿದರು ಜನರು ಅದು ನಂಬಲ್ಲ ಮತದಾರರು ಸಾಕಷ್ಟು ಬುದ್ಧಿವಂತರಿದ್ದಾರೆ.ಹಿಂದುತ್ವ ವಿಚಾರದಲ್ಲಿ ಪೊಳ್ಳು ಹಿಂದುತ್ವ ವಾದಿಗಳಿಂದ ನಮಗೆ ಪಾಠ ಬೇಕಾಗಿಲ್ಲ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಹೇಳಿದರು. ಬೈಂದೂರು ತಾಲೂಕಿನ ನಾಗೂರಿನಲ್ಲಿ ಮಂಗಳವಾರ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಬಿ. ವೈ.ರಾಘವೇಂದ್ರ ಎಂಬುದನ್ನು ಪಕ್ಷವೇ […]

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಏವಿಯೇಷನ್ ವಿಭಾಗದ ವಿದ್ಯಾರ್ಥಿಗಳು ಮಂಗಳೂರು ವಿಮಾನ ನಿಲ್ದಾಣಕ್ಕೆ ಭೇಟಿ

ಉಡುಪಿ:ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿನ ಏವಿಯೇಷನ್ ವಿಭಾಗದ ವಿದ್ಯಾರ್ಥಿಗಳು ಮಂಗಳೂರು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದರು. ಮಂಗಳೂರಿನ ವಿಮಾನ ನಿಲ್ದಾಣಕ್ಕೆ ತೆರಳಿ ವಿಮಾನ ಹಾರಾಟ,ನಿಲ್ದಾಣದ ವೀಕ್ಷಣೆ, ಅಲ್ಲಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಸೂಕ್ತ ಮಾಹಿತಿಯನ್ನು ಪಡೆದರು. ವಿದ್ಯಾರ್ಥಿಗಳೊಂದಿಗೆ , ಉಪನ್ಯಾಸಕಿಯರಾದ ಸವಿತಾ ಮತ್ತು ವೈಷ್ಣವಿ ಉಪಸ್ಥಿತರಿದ್ದರು.

You cannot copy content of this page