ಉಡುಪಿ ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷರಾಗಿ ಜನಾರ್ಧನ ಕೆ.ಎಂ ಆಯ್ಕೆ

ಕುಂದಾಪುರ:ಕರ್ನಾಟಕ ಪತ್ರಕರ್ತರ ಸಂಘ (ರಿ) ಪ್ರೆಸ್ ಕಾಲೊನಿ,ಬೆಳಗಾವಿ ಇದರ ಉಡುಪಿ ಜಿಲ್ಲಾಧ್ಯಕ್ಷರಾಗಿ ಕಿರಣ್ ಪೂಜಾರಿ ಅವರು ರಾಜ್ಯಾಧ್ಯಕ್ಷರಾದ ಎಂ.ಬಿ.ಶಿವಪೂಜಿ ಅವರ ಸೂಚನೆಯಂತೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಜನಾರ್ಧನ ಕೆ.ಎಂ. ಪ್ರಧಾನ ಕಾರ್ಯದರ್ಶಿಯಾಗಿ ಪಿ.ಕೆ.ಪೂಜಾರಿ,ಜೊತೆ ಕಾರ್ಯದರ್ಶಿಯಾಗಿ ವಿಶ್ವನಾಥ ಬೆಳ್ಳಂಪಳ್ಳಿ,ಖಜಾಂಜಿಯಾಗಿ ದೇವೇಂದ್ರ ಸುವರ್ಣ ಅವರು ಆಯ್ಕೆಯಾಗಿದ್ದಾರೆ.

ಹೊಳ್ಮಗೆ ಶ್ರೀ ಬ್ರಹ್ಮ ಬೈದರ್ಕಳ ಕೋಟಿ ಚೆನ್ನಯ್ಯ ಪಂರ್ಜುಲಿ ಹಾಗೂ ಪರಿವಾರ ದೈವಗಳ ವಾರ್ಷಿಕ ಗೆಂಡಸೇವೆ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಕ್ಲಾಡಿ ಗ್ರಾಮದ ಹೊಳ್ಮಗೆ ಶ್ರೀ ಬ್ರಹ್ಮ ಬೈದರ್ಕಳ ಕೋಟಿ ಚೆನ್ನಯ್ಯ ಪಂಜುರ್ಲಿ ಹಾಗೂ ಪರಿವಾರ ದೈವಗಳ ಗರಡಿ ದೈವಸ್ಥಾನದಲ್ಲಿ ವಾರ್ಷಿಕ ಗೆಂಡ ಸೇವೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.ವರ್ಷಂಪ್ರತಿ ನಡೆಯುವ ಶ್ರೀ ದೇವರ ವಾರ್ಷಿಕ ಗೆಂಡಸೇವೆ ಕಾರ್ಯಕ್ರಮದ ಅಂಗವಾಗಿ ದೇವರಿಗೆ ಹೂವಿನ ಅಲಂಕಾರ ಪೂಜೆ,ಮಂಗಳಾರತಿ ಮತ್ತು ಹಣ್ಣುಕಾಯಿ ಸೇವೆ ಹಾಗೂ ತುಲಾಭಾರ ಸೇವೆ,ದೈವದರ್ಶನ ಸೇವೆ,ಹರಕೆ ಕೋಲ ಜರುಗಿತು.ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಕಷ್ಟ ಕಾಲದಲ್ಲಿ ಹೇಳಿ ಕೊಂಡ […]

ಹೊಳ್ಮಗೆ ನೇತ್ರಹೈಗುಳಿ,ಸಪರಿವಾರ ದೈವಸ್ಥಾನದ ವಾರ್ಷಿಕ ಗೆಂಡೆ ಸೇವೆ ಸಂಪನ್ನ

ಕುಂದಾಪುರ:ಹಕ್ಲಾಡಿ ಗ್ರಾಮದ ಹೊಳ್ಮಗೆ ಶ್ರೀ ನೇತ್ರ ಹೈಗುಳಿ ಹಾಗೂ ಸಪರಿವಾರ ದೈವಸ್ಥಾನದಲ್ಲಿ ವಾರ್ಷಿಕವಾಗಿ ನಡೆಯುವ ಗೆಂಡ ಸೇವೆ ಹಾಗೂ ಕೋಲ ಸೇವೆ,ಮಂಗಳಾರತಿ,ಹಣ್ಣುಕಾಯಿ ಸೇವೆ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶುಕ್ರವಾರ ನಡೆಯಿತು.ದೈವವನ್ನು ನಂಬಿದ ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಶ್ರೀ ದೇವರ ದರ್ಶನವನ್ನು ಪಡೆದು ಹರಕೆಯನ್ನು ಸಲ್ಲಿಸಿದರು.ಶ್ರೀ ನೇತ್ರ ಹೈಗುಳಿ ಹಾಗೂ ಸಪರಿವಾರ ದೈವಗಳ ವಾರ್ಷಿಕ ಹಬ್ಬ ಪ್ರತಿ ವರ್ಷ ಮಾ.14 ರಂದು ಆಚರಣೆಗೊಳ್ಳುತ್ತದೆ.

You cannot copy content of this page