ಶ್ರೀದುರ್ಗಾ ಸಂಜೀವಿನಿ ಚಿಕ್ಕಿ ಘಟಕ ಉದ್ಘಾಟನೆ

ಕುಂದಾಪುರ:ಮಹಿಳೆಯರಿಗೆ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಸಂಜೀವಿನಿ ಸಂಘಗಳು ಬಹಳಷ್ಟು ಪ್ರಯೋಜನಾಕಾರಿ ಆಗಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.ಕುಂದಾಪುರ ತಾಲೂಕಿನ ಗುಜ್ಜಾಡಿ ಸಂಜೀವಿನಿ ಒಕ್ಕೂಟದ ಸದಸ್ಯೆ ಕವಿತಾ ಗಾಣಿಗ ಅವರು ಕೊಡಪಾಡಿಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀದುರ್ಗಾ ಸಂಜೀವಿನಿ ಚಿಕ್ಕಿ ಘಟಕವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.ಗುಜ್ಜಾಡಿ ಪಂಚಾಯಿತಿ ಅಧ್ಯಕ್ಷ ತಮ್ಮಯ್ಯ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು.ಬೈಂದೂರು ಬಿ.ಒ ನಾಗೇಶ್ ನಾಯ್ಕ್,ಕುಂದಾಪುರ ತಾಲೂಕು ಪಂಚಾಯತ್ ಮ್ಯಾನೇಜರ್ ರಾಮಚಂದ್ರಮಯ್ಯ,ಎನ್‍ಆರ್‍ಎಲ್‍ಎಂ ಜಿಲ್ಲಾ ವ್ಯವಸ್ಥಾಪಕ ಅವಿನಾಶ್ ಮತ್ತು ತಾಲೂಕು ವ್ಯವಸ್ಥಾಪಕ ಯತೀಶ್,ಮ್ಯಾನೇಜರ್ […]

ಪಲ್ಸ್ ಪೋಲಿಯೊ ಕಾರ್ಯಕ್ರಮ

ಕುಂದಾಪುರ:ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಉಡುಪಿ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ ಜಿಲ್ಲೆ ಮತ್ತು ಆರೋಗ್ಯ ಕೇಂದ್ರ ಹಾಗೂ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗು ಆರೋಗ್ಯ ಸಿಬ್ಬಂದಿಗಳ ಸಹಕಾರದಲ್ಲಿ ಪಲ್ಸ್ ಪೋಲಿಯೊ ಕಾರ್ಯಕ್ರಮ ಕುಂದಾಪುರ ಮತ್ತು ಬೈಂದೂರು ತಾಲೂಕಿನ ಭಾಗದಲ್ಲಿ ಭಾನುವಾರ ಯಶಸ್ವಿಯಾಗಿ ನಡೆಯಿತು.5 ವರ್ಷದೊಳಗಿನ ಮಕ್ಕಳನ್ನು ಹೆತ್ತವರು ಅಂಗನವಾಡಿ ಕೇಂದ್ರಗಳಿಗೆ ಕರೆದು ತಂದು ಲಸಿಕೆಯನ್ನು ಹಾಕಿಕೊಂಡರು.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ,ನಾಲ್ವರು ಶಂಕಿತರು ಪೊಲೀಸರ ವಶಕ್ಕೆ

ಬೆಂಗಳೂರು:ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಶಂಕಿತರನ್ನು ಅಜ್ಞಾತ ಸ್ಥಳದಲ್ಲಿ ಗುಪ್ತಚರ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಅಬ್ದುಲ್​ ಕಲಾಂ ಅವರ ಸ್ಪೂರ್ತಿಯಿಂದ ತೆರೆದಂತಹ ರಾಮೇಶ್ವರಂ ಕೆಫೆ, ಭಾರತದಾದ್ಯಂತ ಬ್ರಾಂಚ್​ಗಳನ್ನ ಹೊಂದಿದೆ.ರಾಮೇಶ್ವರಂ ಕೆಫೆ ದೇಗುಲದ ಕಾನ್ಸೆಪ್ಟ್​ನಲ್ಲಿ ನಿರ್ಮಾಣವಾಗಿದೆ. ಬೆಂಗಳೂರಿನಲ್ಲೂ ಹಲವು ಬ್ರಾಂಚ್​ಗಳಿದ್ದು, ಜನ ಸಾಮಾನ್ಯರ ಜೊತೆಗೆ ಐಟಿ ಸಿಬ್ಬಂದಿಯ ಹಾಟ್​ ಫೇವರೆಟ್ ಸ್ಪಾಟ್ ಕೂಡ ಆಗಿದೆ.ರಾಮೇಶ್ವರ ಕೆಫೆಯಲ್ಲಿ ಮಧ್ಯಾಹ್ನ ಊಟದ ಸಮಯಕ್ಕೆ ಸರಿಯಾಗಿ ಬಾಂಬ್ ಬ್ಲಾಸ್ಟ್ […]

You cannot copy content of this page