ಧಾರಾವಾಹಿಯಲ್ಲಿ ದೈವದ ವೇಷ ಬಳಕೆ,ದೈವಾರಾಧಕ ರಿಂದ ದೂರು ದಾಖಲು

ಮಂಗಳೂರು:ಖಾಸಗಿ ಟಿವಿ ವಾಹಿನಿಯೊಂದು ತನ್ನ ಧಾರವಾಹಿಯಲ್ಲಿ ಕರಾವಳಿಯ ನಂಬಿಕೆ ಭೂತಾರಾಧನೆ ಬಗ್ಗೆ ದೃಶ್ಯಾವಳಿಯನ್ನು ಬಳಸಿಕೊಂಡಿರುವುದು ವಿವಾದಕ್ಕೆ ಕಾರಣವಾಗಿದ್ದು,ಕರಾವಳಿ ಭಾಗದ ದೈವಾರಾಧಕರ ಆಕ್ರೋಶ ಭುಗಿಲೆದ್ದಿದೆ. ಮಾತ್ರವಲ್ಲ ತುಳುನಾಡ ಮಂದಿ ಕೂಡ ಈ ಬಗ್ಗೆ ಆಕ್ರೋಶ ಮತ್ತು ಬೇಸರ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಿಗ್ಗಾಮುಗ್ಗಾ ವಾಹಿನಿ ಬಗ್ಗೆ ಹಾಗೂ ಧಾರಾವಾಹಿ ತಂಡ ಮತ್ತು ಡೈರೆಕ್ಟರ್ ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆರ್ ಪ್ರೀತಮ್ ಶೆಟ್ಟಿ ಈ ಧಾರಾವಾಹಿ ಯನ್ನು ನಿರ್ದೇಶನ ಮಾಡುತ್ತಿದ್ದಾರೆ.ದೈವಾರಾಧನೆ ಪ್ರದರ್ಶನ ಧಾರಾವಾಹಿಗೂ ವ್ಯಾಪಿಸಿರುವುದು ದೈವಾರಾಧಕರ ಕೆಂಗಣ್ಣಿಗೆ ಗುರಿಯಾಗಿದೆ. ಧಾರಾವಾಹಿಯಲ್ಲಿ […]

ಭರತನಾಟ್ಯ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಹೆಮ್ಮಾಡಿ ಜನತಾ ಕಾಲೇಜಿನ ಅಲಕಾ ಹೆಬ್ಬಾರ್

ಹೆಮ್ಮಾಡಿ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯವರು ಧಾರವಾಡದಲ್ಲಿ ಆಯೋಜಿಸಿದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ ಪ್ರಥಮ ಸ್ಥಾನ ಪಡೆದಿರುತ್ತಾರೆ.ಪದವಿ ಪೂರ್ವ ವಿಭಾಗದಿಂದ ಭರತನಾಟ್ಯ ಸ್ಪರ್ಧೆಗೆ ಉಡುಪಿ ಜಿಲ್ಲೆಯಿಂದ ಆಯ್ಕೆಯಾದ ಏಕೈಕ ವಿದ್ಯಾರ್ಥಿನಿಯಾಗಿದ್ದು,ಅಲಕಾ ಹೆಬ್ಬಾರ್ ಕಾಲೇಜಿನ ಸಾಂಸ್ಕೃತಿಕ ತಂಡದ ಉದಯೋನ್ಮುಖ ಪ್ರತಿಭೆ ಇದುವರೆಗೆ ನಡೆದ ಸಾಕಷ್ಟು ಕಾರ್ಯಕ್ರಮಗಳಲ್ಲಿ ಭರತನಾಟ್ಯ ಪ್ರದರ್ಶನ ಮಾಡಿರುತ್ತಾಳೆ ಹಾಗೂ ಸಾಕಷ್ಟು ಬಹುಮಾನಗಳನ್ನು ಪಡೆದಿರುತ್ತಾಳೆ.ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, […]

ಶ್ರೀರಾಮ ಭಜನಾ ಮಂಡಳಿ ಬಡಾಕೆರೆ 32ನೇ ವಾರ್ಷಿಕೋತ್ಸವ

ಕುಂದಾಪುರ:ಹಿರಿಯರು ಮತ್ತು ಕಿರಿಯರ ಒಗ್ಗೂಡುವಿಕೆಯಿಂದ ಭಜನಾ ಮಂಡಳಿಯನ್ನು ಸ್ಥಾಪನೆಮಾಡಿಕೊಂಡು ನಿರಂತರವಾಗಿ ಭಜನಾ ಕೈಂಕರ್ಯದಲ್ಲಿ ತೊಡಗಿಕೊಳ್ಳುವುದರ ಜತೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಕಾರ್ಯಚಟುವಟಿಕೆಗಳನ್ನು ಮಾಡುವುದರ ಮೂಲಕ ಶ್ರೀರಾಮ ಭಜನಾ ಮಂಡಳಿ ಊರಿನ ಪ್ರಮುಖ ಶಕ್ತಿ ಕೇಂದ್ರವಾಗಿ ಕೆಲಸ ಮಾಡುತ್ತಿರುವುದು ಎಲ್ಲರಿಗೂ ಮಾದರಿ ಆಗಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಬೈಂದೂರು ತಾಲೂಕಿನ ಬಡಾಕೆರೆ ಶ್ರೀಲಕ್ಷ್ಮೀ ಜನಾರ್ಧನ ದೇವಸ್ಥಾನದ ವಠಾರದಲ್ಲಿ ಶುಕ್ರವಾರ ನಡೆದ ಶ್ರೀರಾಮ ಭಜನಾ ಮಂಡಳಿ ಬಡಾಕೆರೆ ಅದರ 32ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು […]

You cannot copy content of this page