ಹೇರೂರು:ಮಕ್ಕಳ ವಿಶೇಷ ಗ್ರಾಮಸಭೆಯಲ್ಲಿ ಜ್ವಲಂತ ಸಮಸ್ಯೆಗಳು ಅನಾವರಣ

ಕುಂದಾಪುರ:ಕರ್ನಾಟಕ ಸರಕಾರ,ಜಿಲ್ಲಾ ಪಂಚಾಯತ್ ಉಡುಪಿ,ತಾಲೂಕು ಪಂಚಾಯತ್ ಬೈಂದೂರು ಹಾಗೂ ಹೇರೂರು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಮಕ್ಕಳ ವಿಶೇಷ ಗ್ರಾಮಸಭೆ ಪ್ರಕೃತಿ ಮಡಿಲಲ್ಲಿ ಬುಧವಾರ ನಡೆಯಿತು.ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ ಜರುಗಿತು.ಮಕ್ಕಳ ವಿಶೇಷ ಗ್ರಾಮ ಸಭೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ತಮ್ಮ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸ್ಥಳೀಯಾಡಳಿತದ ಪ್ರತಿನಿಧಿಗಳೊಂದಿಗೆ ಚರ್ಚಿಸಿದರು. ಬೈಂದೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭಾರತಿ ಅವರು ಮಕ್ಕಳ ಗ್ರಾಮ ಸಭೆಯನ್ನು ಉದ್ಘಾಟಿಸಿ ಮಾತನಾಡಿ,ಗ್ರಾಮ ಪಂಚಾಯತ್ ಪ್ರತಿನಿಧಿಗಳು ಮತ್ತು ಅಧಿಕಾರಿ ವರ್ಗದವರು ಮಕ್ಕಳ ಗ್ರಾಮ ಸಭೆಯಲ್ಲಿ ಭಾಗವಹಿಸುವದರ […]

ಮರವಂತೆಯಲ್ಲಿ ಮಕ್ಕಳ ವಿಶೇಷ ಗ್ರಾಮ ಸಭೆ,ಮಕ್ಕಳ ಹಬ್ಬ ಕಾರ್ಯಕ್ರಮ

ಕುಂದಾಪುರ:ಮಕ್ಕಳು ತಮ್ಮ ಪೋಷಕರೊಡನೆರೊಡನೆ ಹಂಚಿಕೊಳ್ಳಲು ಸಾಧ್ಯವಾಗದ ಸಮಸ್ಯೆಗಳನ್ನು ಮಕ್ಕಳ ಗ್ರಾಮ ಸಭೆಯಲ್ಲಿ ಹಂಚಿಕೊಂಡಿದ್ದಾರೆ.ಸಾಮಾಜಿಕ ಕಳಕಳಿಯಿಂದ ಮಕ್ಕಳು ವ್ಯಕ್ತಪಡಿಸಿದ ಸಮಸ್ಯೆಗಳನ್ನು,ಅವರ ಬೇಡಿಕೆಗಳನ್ನು ನೂರಕ್ಕೆ ನೂರಷ್ಟು ಈಡೇರಿಕೆ ಮಾಡಲು ಪ್ರಯತ್ನಿಸಲಾಗುವುದು. ಮಗುವಿನ ಗ್ರಹಿಕೆಯನ್ನು ಅವರೊಳಗೆ ಅಡಗಿರುವ ಸಮಸ್ಯೆಗಳನ್ನು ಅಧ್ಯಾಯನ ಮಾಡಲು ಇಂತಹ ಕಾರ್ಯಕ್ರಮಗಳು ಬಹಳಷ್ಟು ಪ್ರಯೋಜನಕಾರಿ ಆಗುತ್ತದೆ ಎಂದು ಬೈಂದೂರು ಕಾರ್ಯನಿರ್ವಹಣಾಧಿಕಾರಿ ಭಾರತಿ ಹೇಳಿದರು. ಕರ್ನಾಟಕ ಸರಕಾರ,ಜಿಲ್ಲಾ ಪಂಚಾಯತ್ ಉಡುಪಿ,ತಾಲೂಕು ಪಂಚಾಯತ್ ಬೈಂದೂರು,ಗ್ರಾಮ ಪಂಚಾಯತ್ ಮರವಂತೆ ಅವರ ಸಂಯುಕ್ತ ಆಶ್ರಯದಲ್ಲಿ ಮರವಂತೆ ಕಡಲ ತೀರದಲ್ಲಿ ಮಂಗಳವಾರ ನಡೆದ ಮಕ್ಕಳ ವಿಶೇಷ […]

ಶ್ರೀಬಗಳಾಂಬ ತಾಯಿ ದೇವಸ್ಥಾನದ ದ್ವಾರಕ್ಕೆ ರಜತ ಕವಚ ಸಮರ್ಪಣೆ

ಕುಂದಾಪುರ:ಚಿಕ್ಕನ್‍ಸಾಲ್ ರಸ್ತೆ ಕುಂದಾಪುರ ಶ್ರೀ ಬಗಳಾಂಬ ತಾಯಿ ದೇವಸ್ಥಾನದ ಪುನರ್ ಪ್ರತಿಷ್ಠೆ,ಅಷ್ಟಬಂಧ ಬ್ರಹ್ಮಕಲಶೋತ್ಸವ ಅಂಗವಾಗಿ ಶ್ರೀಬಗಳಾಂಬ ತಾಯಿ ದೇವಸ್ಥಾನದ ದ್ವಾರಕ್ಕೆ ರಜತ ಕವಚ ಸಮರ್ಪಣೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಭಾನುವಾರ ನಡೆಯಿತು.ಮಾಸ್ತಿ ಕಟ್ಟೆಯಿಂದ ದೇವಸ್ಥಾನದವರೆಗೆ ರಜತ ಕವಚವನ್ನು ಭವ್ಯ ಮೆರವಣಿಗೆ ಮೂಲಕ ತರಲಾಯಿತು.ಶ್ರೀದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಅಂಗವಾಗಿ ಹಸಿರು ಹೊರೆ ಕಾಣಿಕೆ ಸಮರ್ಪಣೆ ಕಾರ್ಯ ಜರುಗಿತು.ಈ ಸಂದರ್ಭದಲ್ಲಿ ಉತ್ಸವ ಸಮಿತಿ ಅಧ್ಯಕ್ಷರು,ಸದಸ್ಯರು,ಊರ ಹತ್ತು ಸಮಸ್ತರು ಹಾಗೂ ಶ್ರೀಮತಿ ಜಲಜ ಮತ್ತು ಗಣಪತಿ ಸುವರ್ಣ ಶ್ರೀ ಬಗಳಾಂಬ […]

You cannot copy content of this page