ಅಕ್ಷಜ್ ಆರ್ ಖಾರ್ವಿಗೆ ಪ್ರಶಸ್ತಿ

ಕುಂದಾಪುರ:ಜ.28 ರಂದು ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ತಮಿಳುನಾಡಿನ ಕೊಯಮುತ್ತೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಗಂಗೊಳ್ಳಿ ಸೆಂಟರ್ ನ ಅಕ್ಷಜ್ ಆರ್ ಖಾರ್ವಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ.ಇವರು ಕೊಂಚಾಡಿ ರಾಧಾ ಶೆಣೈ ಸ ಹಿ ಪ್ರಾ ಶಾಲೆ ಖಾರ್ವಿಕೇರಿ ಗಂಗೊಳ್ಳಿ ನಾಲ್ಕನೇ ತರಗತಿ ವಿದ್ಯಾರ್ಥಿ. ರವಿಶಂಕರ್ ಖಾರ್ವಿ ಮತ್ತು ಜ್ಯೋತಿ ಖಾರ್ವಿ ದಂಪತಿಗಳ ಪುತ್ರ. ಸಂಸ್ಥೆಯ ಶಿಕ್ಷಕರಾದ ಪ್ರಸನ್ನ ಕೆ. ಬಿ ಮತ್ತು ಸುನಿತಾ ಅವರು ತರಬೇತಿಯನ್ನು ನೀಡಿರುತ್ತಾರೆ.

ಆರಾಧ್ಯ ಖಾರ್ವಿಗೆ ದ್ವಿತೀಯ ಸ್ಥಾನ

ಕುಂದಾಪುರ:ಜ.28 ರಂದು ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ತಮಿಳುನಾಡಿನ ಕೊಯಮುತ್ತೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಗಂಗೊಳ್ಳಿ ಸೆಂಟರ್ ನ ಅರಾಧ್ಯ ಖಾರ್ವಿ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ. ಇವರು ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ನಾಲ್ಕನೇ ತರಗತಿ ವಿದ್ಯಾರ್ಥಿ. ನಾಗರಾಜ್ ಖಾರ್ವಿ ಮತ್ತು ದೀಪಾ ಖಾರ್ವಿ ದಂಪತಿಗಳ ಪುತ್ರಿ .ಸಂಸ್ಥೆಯ ಶಿಕ್ಷಕರಾದ ಪ್ರಸನ್ನ ಕೆ. ಬಿ ಮತ್ತು ಸುನಿತಾ ಇವರು ತರಬೇತಿಯನ್ನು ನೀಡಿರುತ್ತಾರೆ.

ವಿನಿಶ್ ಕುಮಾರ್ ಗೆ ಪ್ರಥಮ ಸ್ಥಾನ

ಕುಂದಾಪುರ:ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ತಮಿಳುನಾಡಿನ ಕೊಯಮುತ್ತೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ 4ನೇ ತರಗತಿ ವಿದ್ಯಾರ್ಥಿ ವಿನಿಶ್ ಕುಮಾರ್ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.ಕಾವ್ರಾಡಿಯ ವಿಜಯ್ ಕುಮಾರ್ ಮತ್ತು ಶಿಕ್ಷಕಿ ಅನುಷಾ ಸಿ.ಬಂಗೇರ ದಂಪತಿಯ ಪುತ್ರ, ಪ್ರಸನ್ನ ಕೆ.ಬಿ,ಸುನೀತಾ ಹಾಗೂ ಮಹಾಲಕ್ಷ್ಮೀ ಅವರು ತರಬೇತಿಯನ್ನು ನೀಡಿದ್ದರು.

You cannot copy content of this page