ಗುಮಾಸ್ತೆ ಪ್ರೇಮಾ.ಕೆ ಬೀಳ್ಕೊಡುಗೆ

ಕುಂದಾಪುರ:ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಂಘದ ಕೇಂದ್ರ ಕಛೇರಿಯಲ್ಲಿ ಕಳೆದ 37 ವರ್ಷಗಳಿಂದ ಅತ್ಯಂತ ಶೃದ್ಧೆ ಮತ್ತು ಪ್ರಾಮಾಣಿಕತೆಯಿಂದ ಗುಮಾಸ್ತೆಯಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿರುವ ಪ್ರೇಮಾ.ಕೆ ಅವರನ್ನು ಸಂಘದ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವತಿಯಿಂದ ಸನ್ಮಾನಿಸಿ,ಗೌರವಿಸಲಾಯಿತು.ಈ ಸಂದರ್ಭ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ,ಉಪಾಧ್ಯಕ್ಷ ಸೂರಜ್ ಖಾರ್ವಿ ಮತ್ತು ನಿರ್ದೇಶಕರು,ಮುಖ್ಯಕಾರ್ಯನಿರ್ವಾಹಣಾಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಆರಾಧ್ಯಗೆ ಪ್ರಥಮ ಸ್ಥಾನ

ಕುಂದಾಪುರ:ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ತಮಿಳುನಾಡಿನ ಕೊಯಮುತ್ತೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಆರಾಧ್ಯ.ಆರ್ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.ಗಂಗೊಳ್ಳಿ ಖಾರ್ವಿಕೇರಿ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ.ರಾಘವೇಂದ್ರ ಪೂಜಾರಿ ಅರಾಟೆ ಮತ್ತು ಶಿಕ್ಷಕಿ ಯಶೋದಾರವರ ಪುತ್ರಿ.ಪ್ರಸನ್ನ.ಕೆ.ಬಿ,ಸುನೀತಾ ಹಾಗೂ ಮಹಾಲಕ್ಷ್ಮೀ ತರಬೇತಿಯನ್ನು ನೀಡಿದ್ದಾರೆ.

ಚುನಾವಣೆ ಬಹಿಷ್ಕಾರದ ಎಚ್ಚರಿಕೆ,ಬ್ಯಾನರ್ ಅಳವಡಿಕೆ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಕೇರಿಕೊಡ್ಲು ಸಂಪರ್ಕ ರಸ್ತೆ ಅಭಿವೃದ್ಧಿ ಪಡಿಸುವಂತೆ ಆಗ್ರಹಿಸಿ ಅಲ್ಲಿನ ನಿವಾಸಿಗಳು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತ ಹಾಕದಿರಲು ನಿರ್ಧರಿಸಿ ಚುನಾವಣ ಬಹಿಷ್ಕಾರದ ಬ್ಯಾನರ್ ಅಳವಡಿಕೆ ಮಾಡುವುದರ ಮುಖೇನ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರಬೈಂದೂರು ವಿಧಾನಸಭಾ ಕ್ಷೇತ್ರದ ಹೊಸಾಡು ಗ್ರಾಮದ ಕೇರಿಕೊಡ್ಲು ಭಾಗದ ನಿವಾಸಿಗಳಿಗೆ ಸುಸಜ್ಜಿತವಾದ ರಸ್ತೆ ಸಂಪರ್ಕ ವ್ಯವಸ್ಥೆಯನ್ನು ಹೊಂದುವುದು ಕನಸಿನ ಮಾತೆ ಎಂದು ಭಾಸವಾಗುತ್ತಿದೆ.ಕಳೆದ ಮುವತ್ತು ವರ್ಷಗಳಿಂದ ಸ್ಥಳೀಯರು ಸಲ್ಲಿಕೆ ಮಾಡುತ್ತಿರುವ ಅಹವಾಲಿಗೆ ಜನಪ್ರತಿನಿಧಿಗಳು,ಅಧಿಕಾರಿಗಳು ಒಂದು ಬಾರಿಯೂ ಸ್ಪಂದನೆ ಮಾಡಿಲ್ಲ.ಮಳೆಗಾಲದಲ್ಲಿ ಕೇಸರಿನ ರಾಡಿಯಿಂದ […]

You cannot copy content of this page