ಫಲಾನುಭವಿಗಳಿಗೆ ಕನ್ನಡಕ ವಿತರಣೆ

ಕುಂದಾಪುರ:ಎಲ್.ಜಿ ಫೌಂಡೇಶನ್ ವತಿಯಿಂದ ಪಡುಕೋಣೆ ಶಾಲೆಯಲ್ಲಿ ಇತ್ತೀಚಿಗೆ ನಡೆದ ನೇತ್ರ ಚಿಕಿತ್ಸಾ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ಶಸ್ತ್ರ ಚಿಕಿತ್ಸೆಗೆ ಒಳಗಾದ ಫಲಾನುಭವಿಗಳಿಗೆ ಉಚಿತವಾಗಿ ಕನ್ನಡಕವನ್ನು ವಿತರಿಸಲಾಯಿತು.ಸುರೇಶ ದೇವಾಡಿಗ ಹಾಗೂ ಪಡುಕೋಣೆ ಶಾಲೆ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಆಚಾರ್ ಮತ್ತು ಶ್ರೀಧರ ಹೊಸ್ಮನೆ ಉಪಸ್ಥಿತರಿದ್ದರು.

ಮಕ್ಕಳ ವಿಶೇಷ ಗ್ರಾಮಸಭೆ,ಮಕ್ಕಳ ಹಕ್ಕುಗಳ ಸಪ್ತಾಹ

ಕುಂದಾಪುರ:ಏಳೆಯ ವಯಸ್ಸಿನಲ್ಲಿ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುಲು ಮಕ್ಕಳ ಗ್ರಾಮಸಭೆ ಅಂತಹ ವೇದಿಕೆ ವಿದ್ಯಾರ್ಥಿಗಳಿಗೆ ಉತ್ತಮವಾದ ಅವಕಾಶವನ್ನು ಒದಗಿಸಿ ಕೊಡುತ್ತದೆ.ಗ್ರಾಮ ಸಭೆಯಲ್ಲಿ ಮಂಡಿಸಿದಂತಹ ಮಕ್ಕಳ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹಕ್ಲಾಡಿ ಪಂಚಾಯಿತಿ ಉಪಾಧ್ಯಕ್ಷ ಹೊಳ್ಮಗೆ ಸುಭಾಶ್ ಶೆಟ್ಟಿ ಹೇಳಿದರು.ಹಕ್ಲಾಡಿ ಗ್ರಾಮ ಪಂಚಾಯತ್ ವತಿಯಿಂದ ಕೆ.ಎಸ್.ಎಸ್ ಸರಕಾರಿ ಪ್ರೌಢಶಾಲೆ ಹಕ್ಲಾಡಿಯಲ್ಲಿ ಸೋಮವಾರ ನಡೆದ 2023-24ನೇ ಸಾಲಿನ ಮಕ್ಕಳ ಗ್ರಾಮಸಭೆ ಮತ್ತು ಮಕ್ಕಳ ಹಕ್ಕುಗಳ ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಹಕ್ಲಾಡಿ ಪಂಚಾಯಿತಿ ಅಧ್ಯಕ್ಷೆ ಪ್ರೇಮಾ ದೇವಾಡಿಗ […]

ಕೇಂದ್ರ ಸಮಿತಿ ಒಕ್ಕೂಟ ಪದಗ್ರಹಣ,ಅನುದಾನಗಳ ವಿತರಣಾ ಕಾರ್ಯಕ್ರಮ

ಕುಂದಾಪುರ:ಕಷ್ಟದಲ್ಲಿರುವ ಜನರನ್ನು ಆರ್ಥಿಕವಾಗಿ ಶೈಕ್ಷಣಿಕವಾಗಿ ಸಾಮಾಜಿಕವಾಗಿ ಮೇಲೆತ್ತುವ ಉದ್ದೇಶದಿಂದ ಆರಂಭಗೊಂಡಿರುವ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಾಜ್ಯದ 31 ಜಿಲ್ಲೆಗಳಲ್ಲಿ ಕಾರ್ಯಚರಿಸುತ್ತಿರುವುದರ ಜತೆಗೆ ಕೇರಳ ರಾಜ್ಯದ ಕಾಸರಗೋಡುನಲ್ಲಿಯೂ ಜನ ಸೇವಾ ಕಾರ್ಯಗಳನ್ನು ಮಾಡುತ್ತಿದೆ ಎಂದು ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಅಪ್ಪಣ್ಣ ಹೆಗ್ಡೆ ಹೇಳಿದರು. ಬೈಂದೂರು ತಾಲೂಕಿನ ನಾಗೂರು ಶ್ರೀಗೋಪಾಲಕೃಷ್ಣ ಸಭಾ ಭವನದಲ್ಲಿ ಶನಿವಾರ ನಡೆದ ಕೇಂದ್ರ ಸಮಿತಿ ಒಕ್ಕೂಟದ ಪದಗ್ರಹಣ ಮತ್ತು ವಿವಿಧ ಅನುದಾನಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸಂಘದ ಸದಸ್ಯರಿಗೆ ಸಹಾಯ ಸಹಕಾರ ಮಾಡುವುದರ […]

You cannot copy content of this page