ಕುಲಕಸುಬನ್ನು ವೃತ್ತಿಯನ್ನಾಗಿ ಪರಿಗಣಿಸಬೇಕು

ಕುಂದಾಪುರ:ಕುಲಕಸುಬನ್ನು ವೃತ್ತಿಯನ್ನಾಗಿ ಪರಿಗಣಿಸಿ ಕೌಶಲ್ಯವೃದ್ಧಿಯಿಂದ ಇನ್ನಷ್ಟು ಚೆಂದವಾಗಿಸುವ ಕೆಲಸ ಮಾಡಬೇಕಾಗಿದೆ ಆ ನಿಟ್ಟಿನಲ್ಲಿ ಅಗತ್ಯವಿದ್ದವರಿಗೆ ಇನ್ನಷ್ಟು ತರಬೇತಿಯನ್ನು ಇಲಾಖೆಯಿಂದ ಕೊಡಿಸುವ ಪ್ರಯತ್ನ ಮಾಡಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಹೇಳಿದರು.ಕರ್ನಾಟಕ ಕೌಶಲ್ಯಾಭಿವೃದ್ಧಿ,ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಉಡುಪಿ ಜಿಲ್ಲಾಡಳಿತ,ಐ.ಟಿ.ಡಿ.ಪಿ. ಉಡುಪಿ ಮತ್ತು ಉಡುಪಿ ಜಿಲ್ಲಾ ಕೊರಗ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಪಡುಕೋಣೆ ಸುನೀತಾ ಅವರ ಮನೆ ವಠಾರದಲ್ಲಿ ಕಳೆದ 30 ದಿನಗಳಿಂದ ನಡೆಯುತ್ತಿರುವ ಬಿದಿರಿನ ಬುಟ್ಟಿ ತಯಾರಿಕಾ ತರಬೇತಿ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಶಿಬಿರಾರ್ಥಿಗಳಿಗೆ […]

ಹಕ್ಲಾಡಿ:ಸಂವಿಧಾನ ಜಾಥಾ ಕಾರ್ಯಕ್ರಮ

ಕುಂದಾಪುರ:ತಾಲೂಕಿನ ಹಕ್ಲಾಡಿ ಗ್ರಾಮ ಪಂಚಾಯತ್‍ನಲ್ಲಿ ಸಂವಿಧಾನ ಜಾಥಾ ಕಾರ್ಯಕ್ರಮ ಶುಕ್ರವಾರ ನಡೆಯಿತು.ಅಂಬೇಡ್ಕರ್ ಮತ್ತು ಗಾಂಧಿಜಿ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನಮಿಸಲಾಯಿತು.ಚಂಡೆ ವಾದನ ಸಹಿತ ಪೂರ್ಣ ಕುಂಭದೊಂದಿಗೆ ಸಂವಿಧಾನ ಜಾಗೃತಿ ರಥವನ್ನು ಸ್ವಾಗತಿಸಿಕೊಳ್ಳಲಾಯಿತು.ಹಂಕ್ಲಾಡಿ ಪಂಚಾಯಿತಿ ಅಧ್ಯಕ್ಷೆ ಪ್ರೇಮಾ ದೇವಾಡಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ದಲಿತ ಸಂಘಟನೆ ಮುಖಂಡ ಉದಯ ಕೊಳೂರು ಸಂವಿಧಾನ ಪ್ರತಿಜ್ಞಾವಿಧಿ ಬೋದಿಸಿದರು.ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸತೀಶ್ ವಡ್ಡರ್ಸೆ ಸಂವಿಧಾನ ಮಹತ್ವ ಕುರಿತು ಮಾಹಿತಿ ನೀಡಿದರು.ಪಂಚಾಯತಿ ಸದಸ್ಯರಾದ ಚೇತನ್ ಹೆಗ್ಡೆ,ಶಾರದ,ವೀಣಾರಾಣಿ,ರಾಧ,ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು,ಆರೋಗ್ಯ ಇಲಾಖೆ ಸತೀಶ್ […]

ಶ್ರೀಸ್ವರ್ಣಯಕ್ಷೀ ವಾರ್ಷಿಕ ವರ್ಧಂತಿ ಮಹೋತ್ಸವ ಕಾರ್ಯಕ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾವುಂದ ಬಡಾಕೆರೆ ಗ್ರಾಮದ ಶ್ರೀಸ್ವರ್ಣಯಕ್ಷೀ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಶನಿವಾರ ನಡೆಯಿತು.ವರ್ಧಂತಿ ಉತ್ಸವದ ಅಂಗವಾಗಿ ಶ್ರೀದೇವರಿಗೆ ಹೂವಿನ ಅಲಂಕಾರ ಪೂಜೆ,ಮಂಗಳಾರತಿ ಮತ್ತು ಹಣ್ಣುಕಾಯಿ ಸೇವೆ,ಸಾರ್ವಜನಿಕ ಅನ್ನತಂರ್ಪಣೆ ಕಾರ್ಯಕ್ರಮ ಜರುಗಿತು.ಗ್ರಾಮಸ್ಥರು ದೇವರಿಗೆ ಪೂಜೆ ಸಲ್ಲಿಸಿ ಪ್ರಸಾದವನ್ನು ಸ್ವೀಕರಿಸಿದರು. ಪ್ರಾಂತೀಯ ಧರ್ಮಾಧಿಕಾರಿಗಳು ಶ್ರೀ ಶಾರದ ಪಿಠಂ ಶೃಂಗೇರಿ ನಾಗ ಪಾತ್ರಿಗಳಾದ ವೇ.ಮೂ.ಲೋಕೇಶ್ ಅಡಿಗ ಬಡಾಕೆರೆ ನಾವುಂದ ಅವರು ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ವೇ.ಮೂ ಲಕ್ಷ್ಮೀಶ ಅಡಿಗ ಅವರು ಧಾರ್ಮಿಕ […]

You cannot copy content of this page