ಮಾರಣಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇಗುಲ : ಸಂಭ್ರಮದ ಮಕರ ಸಂಕ್ರಮಣ ಉತ್ಸವ ಸಂಪನ್ನ
ಕುಂದಾಪುರ:ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇಗುಲದ ವರ್ಷಾವ ಮಕರ ಸಂಕ್ರಮಣ ಉತ್ಸವವು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನಡೆಯಿತು. ದೇಗುಲದ ಆನುವಂಶೀಯ ಆಡಳಿತ ಮೊಕ್ತೇಸರ ಸಿ. ಸದಾಶಿವ ಶೆಟ್ಟಿ ಸಂಕಲ್ಪದಲ್ಲಿ ಪಾಲ್ಗೊಂಡು ಅರ್ಚಕರ ಸಮ್ಮುಖದಲ್ಲಿ ಧಾರ್ಮಿಕ ಕಾರ್ಯಗಳಿಗೆ ಚಾಲನೆ ನೀಡಿದರು.ದೇವರಸನ್ನಿಧಿಯಲ್ಲಿ ವಿಶೇಷ ಪೂಜೆ ಮಹಾ ಮಂಗಳಾರತಿ ನಡೆಯಿತು.ಬುಟ್ಟಿಯಲ್ಲಿ ಸೇವಂತಿಗೆ, ಸಿಂಗಾರ ಹೂ ಸಹಿತ ಹಣ್ಣುಕಾಯಿಯೊಡನೆ ತಲೆಯ ಮೇಲೆ ಹೊತ್ತು ಶ್ರೀ ದೇವರಿಗೆ ಹರಕೆ ರೂಪದಲ್ಲಿ ಸಮರ್ಪಣೆ ಮಾಡುವ ಪದ್ಧತಿ ರೂಢಿಯಲ್ಲಿದ್ದು, ಅದಕ್ಕಾಗಿ ವಿವಿಧ ರಾಜ್ಯ ಜಿಲ್ಲೆ ತಾಲೂಕುಗಳಿಂದ ಆಗಮಿಸಿದ ಭಕ್ತರು […]