ಅನುಷ್ಠಾನಗೊಂಡಿರುವ ನೀರಾವರಿ ಯೋಜನೆ ಸ್ಥಳೀಯರ ಅಭಿಪ್ರಾಯದೊಂದಿಗೆ ಮುಂದುವರಿಕೆ-ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ

ಬೈಂದೂರು:ಸುಮಾರು 72 ಕೋಟಿ.ರೂ ವೆಚ್ಚದಲ್ಲಿ ಬೈಂದೂರು ತಾಲೂಕಿನ ಕಂಬದಕೋಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರಂಜಾಲು ಎಂಬಲ್ಲಿ ನಡೆಯುತ್ತಿರುವ ಹೇರಂಜಾಲು ಗುಡೇ ದೇವಸ್ಥಾನ ಏತ ನೀರಾವರಿ ಕಾಮಗಾರಿ ಪ್ರದೇಶಕ್ಕೆ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಶಾಸಕರು,ಬಹು ಚರ್ಚಿತ ಗುಡೇ ದೇವಸ್ಥಾನ ಏತ ನೀರಾವರಿ ಯೋಜನೆ ಸ್ಥಳೀಯರು ಹಾಗೂ ರೈತರ ವಿಶ್ವಾಸವನ್ನು ಪಡೆದುಕೊಂಡು ಒಂದಿಷ್ಟು ಬದಲಾವಣೆಯೊಂದಿಗೆ ಕಾಮಗಾರಿ ಕೆಲಸವನ್ನು ಪೂರ್ಣಗೊಳಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲು ಪ್ರಯತ್ನಿಸಲಾಗುವುದು […]

ರಾಜ್ಯ ಉಪಾಧ್ಯಕ್ಷರಾಗಿ ಅವಿರೋಧವಾಗಿ ಸುರೇಂದ್ರ ಗುಡ್ಡೆ ಹೋಟೆಲ್ ನಾಡ ಆಯ್ಕೆ

ಬೆಂಗಳೂರು:ಕರ್ನಾಟಕ ರಾಜ್ಯ ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘ ( ರಿ) ಬೆಂಗಳೂರು.ಇದರಲ್ಲಿ ಸದಸ್ಯರಾಗಿದ್ದು ಹಾಗೂ ಸಂಘದಲ್ಲಿ ಸದಾ ಕ್ರಿಯಾಶೀಲರಾಗಿ ತಮ್ಮ ರಾಜ್ಯ ಮತ್ತು ರಾಷ್ಟ್ರಮಟ್ಟದ ಚಟುವಟಿಕೆಗಳ ಮೂಲಕ ಮಾದರಿಯಾಗಿರುವ ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನ ಸೇನಾಪುರದ ಶ್ರೀ ಸುರೇಂದ್ರ ಗುಡ್ಡೆ ಹೋಟೆಲ್ ನಾಡ.ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ಮತ್ತು ಅರೆ ಸರ್ಕಾರಿ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷರನ್ನಾಗಿ ರಾಜ್ಯಾಧ್ಯಕ್ಷರಾದ ಶ್ರೀ ವಿಶ್ವನಾಥ್ ಧುಮಾಳ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎಸ್ ಸರಿಕಾರ್,ಶ್ರೀ […]

ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಗದೀಶ ಪಿ.ಪೂಜಾರಿ ಹಕ್ಕಾಡಿ ಹಾಗೂ ಉಪಾಧ್ಯಕ್ಷರಾಗಿ ಸತೀಶ ಕುಮಾರ್ ಶೆಟ್ಟಿ ಆಯ್ಕೆ

ಕುಂದಾಪುರ:ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಅದರ ಪ್ರಧಾನ ಕಚೇರಿಯಲ್ಲಿ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಭೆ ಗುರುವಾರ ನಡೆಯಿತು. ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಅದರ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಜಗದೀಶ ಪಿ.ಪೂಜಾರಿ ಹಕ್ಕಾಡಿ ಹಾಗೂ ಉಪಾಧ್ಯಕ್ಷರಾಗಿ ಸತೀಶ ಕುಮಾರ್ ಶೆಟ್ಟಿ ಆಯ್ಕೆಯಾಗಿದರು.ಅಧ್ಯಕ್ಷ ಜಗದೀಶ ಪಿ.ಪೂಜಾರಿ ಹಕ್ಕಾಡಿ ಮಾತನಾಡಿ,ಸಾರ್ವಜನಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಅರೆಹೊಳೆ ಕುದ್ರುಕೋಡು ಮಧ್ಯ ಭಾಗದಲ್ಲಿ ನಮ್ಮ ಸಂಘದ ವತಿಯಿಂದ ರೇಷನ್ ಅಂಗಡಿಯನ್ನು ತೆರೆಯುವ ಉದ್ದೇಶವನ್ನು […]

You cannot copy content of this page