ಶೃಂಗೇರಿ ಶ್ರೀಗಳ ಅಡ್ಡ ಪಲ್ಲಕ್ಕಿ ಉತ್ಸವ

ಕುಂದಾಪುರ:ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನದ ವಾರ್ಷಿಕ ವಧರ್ಂತ್ಯುತ್ಸವ ಮತ್ತು ಪರಮಪೂಜ್ಯ ದಕ್ಷಿಣಾಮ್ನಾಯ ಶೃಂಗೇರಿ ಶಾರದ ಪೀಠಾಧೀಶ್ವರರಾದ ಶ್ರೀ ಜಗದ್ಗುರು ವಿಧುಶೇಖರ ಭಾರತೀ ಸ್ವಾಮಿಗಳವರ ಅಡ್ಡ ಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ಮಂಗಳವಾರ ನಡೆಯಿತು.ಪರಮಪೂಜ್ಯ ದಕ್ಷಿಣಾಮ್ನಾಯ ಶೃಂಗೇರಿ ಶಾರದ ಪೀಠಾಧೀಶ್ವರರಾದ ಶ್ರೀ ಜಗದ್ಗುರು ವಿಧುಶೇಖರ ಭಾರತೀ ಸ್ವಾಮಿಗಳನ್ನು ಪೂರ್ಣ ಕುಂಭದೊಂದಿಗೆ ಸ್ವಾಗತಿಸಿಕೊಳ್ಳಲಾಯಿತು.ಶ್ರೀಗಳ ಅಡ್ಡ ಪಲ್ಲಕ್ಕಿ ಉತ್ಸವ ನಗರ ಮಹಾಂಕಾಳಿ ದೇವಸ್ಥಾನದಿಂದ ಬಂದರಿನ ಬಸ್ ನಿಲ್ದಾಣ ವರೆಗೆ ಸಾಗಿ ತದ ನಂತರ ಗಂಗೊಳ್ಳಿ ರಾಜ ಬೀದಿಯ ಮೂಲಕ ಶ್ರೀಮಹಾಂಕಾಳಿ […]

ಬೈಂದೂರು ಸ್ಪೋರ್ಟ್ಸ್ ಕ್ಲಬ್,ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ

ಕುಂದಾಪುರ:ಬೈಂದೂರು ಸ್ಪೋರ್ಟ್ಸ್ ಕ್ಲಬ್ ವತಿಯಿಂದ 4ನೇ ವರ್ಷದ ರಾಜ್ಯ ಮಟ್ಟದ 40 ಗಜಗಳ ಟೆನಿಸ್ ಬಾಲ್ ಕ್ರಿಕೆಟ್ ಹಗಲು ರಾತ್ರಿ ಪಂದ್ಯಾಟ ಬೈಂದೂರು ಟ್ರೋಫಿ-2024 ಗಾಂಧಿ ಮೈದಾನದಲ್ಲಿ ಅದ್ದೂರಿಯಾಗಿ ಶನಿವಾರ ನಡೆಯಿತು. ಬೈಂದೂರು ಸ್ಪೋರ್ಟ್ಸ್ ಕ್ಲಬ್ ಅವರು ಆಯೋಜಿಸಿದ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ಪಾಂಚಜನ್ಯ ಕೋಟೇಶ್ವರ ಪ್ರಥಮ ಸ್ಥಾನವನ್ನು ಪಡೆಯಿತು,ಶೆಟ್ಟಿ ಎಂಪಿಯರ್ ದ್ವಿತೀಯ ಸ್ಥಾನವನ್ನು ಪಡೆದು ಕೊಂಡಿದೆ.ಪ್ರಥಮ ಬಹುಮಾನವಾಗಿ 1,00,006 ಹಾಗೂ ಟ್ರೋಫಿ,ದ್ವಿತೀಯ ಬಹುಮಾನವಾಗಿ 50,006 ಹಾಗೂ ಟ್ರೋಫಿಯನ್ನು ವಿಜೇತರಾದ ತಂಡದವರಿಗೆ ನೀಡಲಾಯಿತು. ಬೈಂದೂರು ಸ್ಪೋರ್ಟ್ಸ್ […]

ಶ್ರೀಸುಬ್ರಹ್ಮಣ್ಯ ದೇವರಿಗೆ ನಾಗಮಂಡಲೋತ್ಸವ ಸೇವೆ

ಕುಂದಾಪುರ:ತಾಲೂಕಿನ ಗುಡ್ಡಮ್ಮಾಡಿ ಶ್ರೀಸುಬ್ರಹ್ಮಣ್ಯ ದೇವರ ಎರಡನೇ ದಿನದ ಷಷ್ಠಿ ಮಹೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ಬುಧವಾರ ಹಾಲಿಟ್ಟು ಸೇವೆ,ನಾಗಮಂಡಲ ಸೇವೆ ಜರುಗಿತು.ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಶ್ರೀಸುಬ್ರಹ್ಮಣ್ಯ ದೇವರ ದರ್ಶನ ಪಡೆದರು.

You cannot copy content of this page