ಸರಕಾರಿ ಹಿರಿಯ ಪ್ರಾಥಮಿಕ ಪಡುಕೋಣೆ ಶಾಲೆ ವಾರ್ಷಿಕೋತ್ಸವ

ಕುಂದಾಪುರ:ಸರಕಾರಿ ಶಾಲೆಗಳ ಏಳಿಗೆಗೆ ಹಳೆ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರ ಪಾತ್ರ ಬಹಳ ಮುಖ್ಯವಾದದ್ದು ಶಾಲೆ ಮೇಲಿನ ಪ್ರೀತಿ ಹೆಚ್ಚಾದಾಗ ಮಾತ್ರ ಕನ್ನಡ ಶಾಲೆಗಳು ಉಳಿಯಲು ಸಾಧ್ಯವಾಗುತ್ತದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.ಹಳೆ ವಿದ್ಯಾರ್ಥಿಗಳ ಸಂಘ ಕೋಟೆಗುಡ್ಡೆ (ಪಡುಕೋಣೆ ಶಾಲೆ) ಸಹಕಾರದಿಂದ ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಪಡುಕೋಣೆ ಶಾಲೆಯಲ್ಲಿ ಶನಿವಾರ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪಡುಕೋಣೆ ಶಾಲೆಯನ್ನು ದತ್ತು ಸ್ವೀಕಾರ ಮಾಡಿರುವ ಡಾ.ವಿಜಯಕೃಷ್ಣ ಅವರು ಸಭಾಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ರಾಜಕೀಯ […]

ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರ ಸಂಘ ನವೀಕೃತ ಶಾಖೆ ಉದ್ಘಾಟನೆ

ಕುಂದಾಪುರ:ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರ ಸಂಘ ಗಂಗೊಳ್ಳಿ ಅದರ ಕುಂದಾಪುರ ಶಾಖೆಯ ನವೀಕೃತ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ವಿದ್ಯಾರಂಗ ಮಿತ್ರ ಮಂಡಳಿ ಖಾರ್ವಿಕೇರಿ ಕುಂದಾಪುರದಲ್ಲಿ ನಡೆಯಿತು.ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು ಉದ್ಘಾಟಿಸಿ ಶುಭಹಾರೈಸಿದರು. ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರ ಸಂಘ ಅಧ್ಯಕ್ಷ ಸದಾಶಿವ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು,ಶ್ರೀಮಹಾಕಾಳಿ ದೇವಸ್ಥಾನ ಕುಂದಾಪುರ ಅಧ್ಯಕ್ಷ ಜಯಾನಂದ ಖಾರ್ವಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ,ಸಹಕಾರ ಸಂಘಗಳ ಸಹಾಯಕ ನಿಬಂಧಕರು ಕುಂದಾಪುರ ಅರುಣಕುಮಾರ್ ಎಸ್.ವಿ,ಕರಾವಳಿ ಸಾಂಪ್ರದಾಯಿಕ ನಾಡದೋಣಿ ಅಧ್ಯಕ್ಷ […]

ಮಾರಣಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇಗುಲ : ಸಂಭ್ರಮದ ಮಕರ ಸಂಕ್ರಮಣ ಉತ್ಸವ ಸಂಪನ್ನ

ಕುಂದಾಪುರ:ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇಗುಲದ ವರ್ಷಾವ ಮಕರ ಸಂಕ್ರಮಣ ಉತ್ಸವವು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನಡೆಯಿತು. ದೇಗುಲದ ಆನುವಂಶೀಯ ಆಡಳಿತ ಮೊಕ್ತೇಸರ ಸಿ. ಸದಾಶಿವ ಶೆಟ್ಟಿ ಸಂಕಲ್ಪದಲ್ಲಿ ಪಾಲ್ಗೊಂಡು ಅರ್ಚಕರ ಸಮ್ಮುಖದಲ್ಲಿ ಧಾರ್ಮಿಕ ಕಾರ್ಯಗಳಿಗೆ ಚಾಲನೆ ನೀಡಿದರು.ದೇವರಸನ್ನಿಧಿಯಲ್ಲಿ ವಿಶೇಷ ಪೂಜೆ ಮಹಾ ಮಂಗಳಾರತಿ ನಡೆಯಿತು.ಬುಟ್ಟಿಯಲ್ಲಿ ಸೇವಂತಿಗೆ, ಸಿಂಗಾರ ಹೂ ಸಹಿತ ಹಣ್ಣುಕಾಯಿಯೊಡನೆ ತಲೆಯ ಮೇಲೆ ಹೊತ್ತು ಶ್ರೀ ದೇವರಿಗೆ ಹರಕೆ ರೂಪದಲ್ಲಿ ಸಮರ್ಪಣೆ ಮಾಡುವ ಪದ್ಧತಿ ರೂಢಿಯಲ್ಲಿದ್ದು, ಅದಕ್ಕಾಗಿ ವಿವಿಧ ರಾಜ್ಯ ಜಿಲ್ಲೆ ತಾಲೂಕುಗಳಿಂದ ಆಗಮಿಸಿದ ಭಕ್ತರು […]

You cannot copy content of this page