ಕಿರಿಮಂಜೇಶ್ವರ:ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಕಾರ್ಯಕ್ರಮ
ಕುಂದಾಪುರ:ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಕಿರಿಮಂಜೇಶ್ವರ ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಅದ್ಧೂರಿಯಾಗಿ ಶನಿವಾರ ನಡೆಯಿತು. ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಉದ್ಘಾಟಿಸಿ ಮಾತನಾಡಿ,ಮಕ್ಕಳ ಒಳಗೆ ಅಡಗಿರುವ ಪ್ರತಿಭೆಯನ್ನು ಹೊರ ತರುವಲ್ಲಿ ಪ್ರತಿಭಾ ಕಾರಂಜಿ ಅಂತಹ ಕಾರ್ಯಕ್ರಮಗಳು ಬಹಳಷ್ಟು ಉಪಯೋಗಕಾರಿ ಆಗಿದೆ.ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸುವುದರಿಂದ ಮಗುವಿನ ಬೌದ್ಧಿಕ ಶಕ್ತಿ ವೃದ್ಧಿ […]