ಧನ್ವಿ ಮರವಂತಗೆ ರಾಜ್ಯೋತ್ಸವ ಬಾಲ ಪ್ರಶಸ್ತಿ

ಕುಂದಾಪುರ:ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ,ಇನ್ವೆಂಜರ್ ಫೌಂಡೇಶನ್ ಮಂಗಳೂರು,ಸೃಷ್ಠಿ ಫೌಂಡೇಶನ್ ಕಟಪಾಡಿ,ಪ್ರಥಮ್ಸ್ ಮ್ಯಾಜಿಕ್ ವಲ್ರ್ಡ್ ಕಟಪಾಡಿ ಅವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಸುವರ್ಣ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ ರಾಜ್ಯ ಮಟ್ಟದ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಬಾಲಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಂತರಾಷ್ಟ್ರೀಯ ಯೋಗಪಟು ಧನ್ವಿ ಮರವಂತೆ ಅವರಿಗೆ ಕರ್ನಾಟಕ ರಾಜ್ಯೋತ್ಸವ ಬಾಲ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ಅವರು ತ್ರಾಸಿ ಡಾನ್ ಬಾಸ್ಕೋ ಶಾಲೆ 10ನೇ ತರಗತಿ ವಿದ್ಯಾರ್ಥಿನಿ.

ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ ಏರಿಕೆ

ಕುಂದಾಪುರ:ಕೊಬ್ಬರಿ ಧಾರಣೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ತೆಂಗು ಬೆಳೆಗಾರರಿಗೆ ಕೇಂದ್ರ ಸರಕಾರ ಬೆಂಬಲ ಬೆಲೆ ಘೋಷಣೆ ಮಾಡಿರುವುದರಿಂದ ಕರಾವಳಿ ಸಹಿತ ದೇಶದ ತೆಂಗು ಬೆಳೆಗಾರರ ಮೊಗದಲ್ಲಿ ಸಂತಸ ಮೂಡಿಸಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ತಿಳಿಸಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆಯು ದೇಶದ ತೆಂಗು ಬೆಳೆಗಾರರ ಸಂಕಷ್ಟವನ್ನು ಅರಿತು ಬೆಂಬಲ ಬೆಲೆ ಹೆಚ್ಚಿಸುವ ನಿರ್ಧಾರವನ್ನು ತನ್ನ ಸಚಿವ ಸಂಪುಟ ಸಭೆಯಲ್ಲಿ ಅಂಗೀಕರಿಸಿದೆ. ಮೋದಿ ಸರ್ಕಾರದ ಈ ನಿರ್ಧಾರದಿಂದ.ಕೇಂದ್ರ […]

ಸಾವಿನಲ್ಲೂ ಸಾರ್ಥಕತೆ ಮೆರೆದ ಕುಶಲ ಶೆಟ್ಟಿ ಆಲೂರು

ಕುಂದಾಪುರ:ತಾಲೂಕಿನ ಆಲೂರು ಗ್ರಾಮ ಪಂಚಾಯತ್ ಹಾಗೂ ಆಲೂರು ಸಹಕಾರಿ ಸಂಘದ ಮಾಜಿ ಅಧ್ಯಕ್ಷರು ಮತ್ತು ಗ್ರಾಮ ವಿಕಾಸ ಸಮಿತಿ ಕಾರ್ಯಕರ್ತರಾದ ಆಲೂರು ಗ್ರಾಮದ ನಿವಾಸಿ ಕುಶಲ ಶೆಟ್ಟಿ (65) ಅವರು ಅನಾರೋಗ್ಯ ಕಾರಣದಿಂದ ಬುಧವಾರ ನಿಧನರಾದರು.ಅವರಿಗೆ ಪತ್ನಿ,ಓರ್ವ ಪುತ್ರಿ ಇದ್ದಾರೆ.ಸಮಾಜ ಮುಖಿ ಚಿಂತನೆಗಳನ್ನು ಮೈಗೂಡಿಸಿಕೊಂಡಿದ್ದ ಕುಶಲ ಶೆಟ್ಟಿ ಅವರು ಕಳೆದ ಏಳು ವರ್ಷಗಳ ಹಿಂದೆಯೇ ತಮ್ಮ ದೇಹವನ್ನು ದಾನ ಮಾಡುವುದರ ಮುಖೇನ ಮಾದರಿ ಹೆಜ್ಜೆಯನ್ನು ಇಟ್ಟಿದ್ದರು.ಕುಶಲ ಶೆಟ್ಟಿ ಅವರ ಮೃತದೇಹವನ್ನು ಸಾರ್ವಜನಿಕರ ದರ್ಶನಕ್ಕೆ ಇಟ್ಟ ಬಳಿಕ ಅವರ […]

You cannot copy content of this page