ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಬಂಟ್ವಾಡಿ ಶಾಲೆ ಅಮೃತ ಮಹೋತ್ಸವ ಸಂಭ್ರಮ-2025
ಕುಂದಾಪುರ:ಬೈಂದೂರು ವಲಯದ ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಬಂಟ್ವಾಡಿ ಶಾಲೆಯಲ್ಲಿ ಅಮೃತ ಮಹೋತ್ಸವ-2025 ಕಾರ್ಯಕ್ರಮ ಅದ್ಧೂರಿಯಾಗಿ ಶುಕ್ರವಾರ ನಡೆಯಿತು.ಗುಡ್ಡಮ್ಮಾಡಿ ದೇವಸ್ಥಾನದಿಂದ ಬಂಟ್ವಾಡಿ ಶಾಲೆ ವರೆಗೆ ಭವ್ಯ ಮೆರವಣಿಗೆ ನಡೆಯಿತು.ಚಂಡೆವಾದನ ವಾದ್ಯ ಘೋಷ ಮೆರವಣಿಗೆ ಸೊಬಗನ್ನು ಹೆಚ್ಚಿಸಿತು.ಅಮೃತ ಮಹೋತ್ಸವ ಸ್ವಾಗತ ಗೋಪುರದ ಉದ್ಘಾಟನೆ ಮತ್ತು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಾಯಿತು.ಬೆಳಗೆ ಅಮೃತ ಮಹೋತ್ಸವ ಉದ್ಘಾಟನಾ ಕಾರ್ಯಕ್ರಮವನ್ನು ನಾರಾಯಣ ಶೆಟ್ಟಿ ನೆರವೇರಿಸಿದರು.ಶಾಲೆಯ ಸಂಚಾಲಕ ಬಿ.ಅರುಣ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಅತಿಥಿಗಳು ಭಾಗವಹಿಸಿದ್ದರು.ಅಂಗನವಾಡಿ ವಿದ್ಯಾರ್ಥಿಗಳಿಂದ ಮತ್ತು ಶಾಲಾ ಮಕ್ಕಳಿಂದ ನೃತ್ಯ ಸಿಂಚನ ಕಾರ್ಯಕ್ರಮ […]