ಆಲೂರು ಪ್ರೌಢಶಾಲೆ ವಿದ್ಯಾರ್ಥಿಗಳು,ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪುರ:ಭಾರತ ಚುನಾವಣ ಆಯೋಗ,ಜಿಲ್ಲಾಧಿಕಾರಿಗಳ ಕಚೇರಿ ಉಡುಪಿ,ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪನಿರ್ದೇಶಕರ ಕಚೇರಿ ಉಡುಪಿ ವತಿಯಿಂದ ನಡೆದ ಜಿಲ್ಲಾ ಮಟ್ಟದ ಮತದಾರ ಕ್ಲಬ್‍ನ ರಸಪ್ರಶ್ನೆ ಸ್ಪರ್ಧೆಯಲ್ಲಿ ಆಲೂರು ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಾದ ಗ್ರೀಷ್ಮಾ ಮತ್ತು ಪ್ರಜ್ಞಾ ಅವರು ಮೈಸೂರಿನಲ್ಲಿ ನಡೆಯುವ ರಾಜ್ಯದ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಹೊಸಾಡು ಶಾಲೆ ಶತಮಾನೋತ್ಸವ ಸಮಿತಿ ಅಧ್ಯಕ್ಷರಾಗಿ ಡಾ.ಉಮೇಶ ಪುತ್ರನ್ ಆಯ್ಕೆ

ಕುಂದಾಪುರ:ತಾಲೂಕಿನ ಹೊಸಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಪೂರ್ವಾಭಾವಿ ಸಭೆ ಹೊಸಾಡು ಶಾಲೆಯಲ್ಲಿ ಭಾನುವಾರ ನಡೆಯಿತು.ಶತಮಾನೋತ್ಸವ ಸಮಿತಿ ಅಧ್ಯಕ್ಷರಾಗಿ ಡಾ.ಉಮೇಶ್ ಪುತ್ರನ್ ಅರಾಟೆ ಅವರು ಸರ್ವಾನುಮತದಿಂದ ಆಯ್ಕೆಯಾದರು.ಕಾರ್ಯದರ್ಶಿಯಾಗಿ ಹೊಸಾಡು ಶಾಲೆ ಮುಖ್ಯ ಶಿಕ್ಷಕ ರಾಜೇಶ್,ಶತಾಬ್ಧಿ ಯೋಜನಾ ಸಮಿತಿ ಅಧ್ಯಕ್ಷರಾಗಿ ಚಂದ್ರಶೇಖರ ಪೂಜಾರಿ ಅರಾಟೆ,ಕೋಶಾಧಿಕಾರಿಯಾಗಿ ರಾಜೀವ ಶೆಟ್ಟಿ ಕಡ್ಲೇರ ಮನೆ ಹಾಗೂ ಆರ್ಥಿಕ ಸಮಿತಿ ಅಧ್ಯಕ್ಷರಾಗಿ ಡಾ.ಕಿಶೋರ್ ಕುಮಾರ್ ಶೆಟ್ಟಿ ಅವರನ್ನು ಆಯ್ಕೆಮಾಡಲಾಯಿತು.ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕ ಸದಾಶಿವ ಶೆಟ್ಟಿ,ರಾಜೀವ ಶೆಟ್ಟಿ,ಎಂ.ಎಂ ಸುವರ್ಣ,ವಕೀಲರಾದ ಮಂಜುನಾಥ ಅರಾಟೆ,ಹಳೆ ವಿದ್ಯಾರ್ಥಿ […]

ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬೈಂದೂರು ಗೋಳಿಹೊಳೆ-ಸೌಹಾರ್ದ ಸಹಕಾರಿ ದಿನಾಚರಣೆ

ಬೈಂದೂರು:ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬೈಂದೂರು-ಗೋಳಿಹೊಳೆ ವತಿಯಿಂದ ಸೌಹಾರ್ದ ಸಹಕಾರಿ ದಿನಾಚರಣೆ, ಗ್ರಾಹಕರ ಸಭೆ ಮಹಿಷಮರ್ಧಿನಿ ಸಭಾಭವನ ಗೋಳಿಹೊಳೆಯಲ್ಲಿ ಅದ್ದೂರಿಯಾಗಿ ಸೋಮವಾರ ನಡೆಯಿತು.ಸೌಹಾರ್ದ ಸಹಕಾರಿ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಸಂಘದ ಸದಸ್ಯರು ಹಾಗೂ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.ಆಶಾ ಕಾರ್ಯಕರ್ತೆಯರನ್ನು ಗೌರವಿಸಲಾಯಿತು.ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು. ಕರ್ನಾಟಕ ರಾಜ್ಯ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು ನಿರ್ದೇಶಕರಾದ ಎಸ್.ಕೆ ಮಂಜುನಾಥ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಕಾಡಂಚಿನ ಪ್ರದೇಶವನ್ನು ಹೊಂದಿರುವ ಗೋಳಿಹೊಳೆ ಅಂತಹ ಪ್ರದೇಶದಲ್ಲಿ ಸೌಹಾರ್ದ […]

You cannot copy content of this page