ಬೈಂದೂರು:ಸರಕಾರಿ ಹಿರಿಯ ಪ್ರಾಥಮಿಕ ನಾವುಂದ ಶಾಲೆ ವಾರ್ಷಿಕೋತ್ಸವ

ಬೈಂದೂರು:ಸರಕಾರಿ ಹಿರಿಯ ಪ್ರಾಥಮಿಕ ನಾವುಂದ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ಶಾಲಾ ವಠಾರದಲ್ಲಿ ಶನಿವಾರ ನಡೆಯಿತು.ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ವೈವಿಧ್ಯಮ ಮನೋರಂಜನ ಮತ್ತು ನೃತ್ಯ ಕಾರ್ಯಕ್ರಮ ಹಾಗೂ ವೀರ ಅಭಿಮನ್ಯು ಎಂಬ ಯಕ್ಷಗಾನ ಪ್ರದರ್ಶನ ಜರುಗಿತು.ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.ಕಲಿಕಾ ಬಹುಮಾನ ವಿತರಿಸಲಾಯಿತು. ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಮಾತನಾಡಿ,ಸರಕಾರಿ ಶಾಲೆಗಳಲ್ಲಿ ಓದಿದ ಬಹಳಷ್ಟು ಮಂದಿ ಇಂದು ಉನ್ನತ ಹುದ್ದೆಗಳನ್ನು ಪಡೆದು ಜನ ಸೇವೆಯೊಂದಿಗೆ ಉತ್ತಮವಾದ ಹೆಸರನ್ನು ಗಳಿಸಿದ್ದಾರೆ.ಆಧುನಿಕ ಯುಗದಲ್ಲಿ ಸಂಸ್ಕಾರಯುತ ಶಿಕ್ಷಣ ಎನ್ನುವುದು ಇಂದಿನ […]

ಸರಕಾರಿ ಹಿರಿಯ ಪ್ರಾಥಮಿಕ ಕಂಬದಕೋಣೆ ಶಾಲೆ 125ನೇ ವಾರ್ಷಿಕೋತ್ಸವ

ಬೈಂದೂರು:ತಾಲೂಕಿನ ಕಂಬದಕೋಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 125ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಆರ್.ಕೆ ಸಂಜೀವ ರಾವ್ ಸ್ಮಾರಕ ವಿಜಯ ರಂಗ ಮಂದಿರದಲ್ಲಿ ಅದ್ದೂರಿಯಾಗಿ ಶನಿವಾರ ನಡೆಯಿತು.ಶಾಲಾ ವಾರ್ಷಿಕೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.ಶಾಲಾ ಶಿಕ್ಷಕರನ್ನು,ದಾನಿಗಳನ್ನು,ಅಡುಗೆ ಸಾಹಯಕರನ್ನು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ನಂಜಾರು ಕಾಮಧೇನು ಗೋಶಾಲೆ ಮಹಾ ಪೋಷಕರು,ಕಂಬಕೋಣೆ ಶ್ರೀಮಹಾಲಿಂಗೇಶ್ವರ ದೇವಸ್ಥಾನ ಮತ್ತು ಆರ್.ಕೆ ಸಂಜೀವ ರಾವ್ ದತ್ತಿ ಧರ್ಮರ್ಶಿಗಳು,ಸಂದೀಪನ್ ಆಂಗ್ಲ ಮಾಧ್ಯಮ ಶಾಲೆ ನಾಗೂರು ಅದರ ಸಂಸ್ಥಾಪಕ ಟ್ರಸ್ಟಿಗಳಲ್ಲಿ ಒಬ್ಬರಾದ ಕೆ.ಎಸ್ ಪ್ರಮೋದ್ ಅಣ್ಣನವರ […]

ಯೋಗಾ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದ ಅಂತಾರಾಷ್ಟ್ರೀಯ ಯೋಗ ಪಟು ತನ್ವಿತಾ ಪೂಜಾರಿ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕುಂದಬಾರಂದಾಡಿ ಗ್ರಾಮದ ನಿವಾಸಿ ಪುಷ್ಪಲತಾ ಮತ್ತು ವಸಂತ ಅವರ ದಂಪತಿಗಳ ಪುತ್ರಿ ಬಾಲ ಪ್ರತಿಭೆ ಕು.ತನ್ವಿತಾ ಪೂಜಾರಿ ಯೋಗಾಸನದಲ್ಲಿ ಚಿನ್ನ,ಬೆಳ್ಳಿ,ಕಂಚು ಸೇರಿದಂತೆ ಒಟ್ಟು 65 ಕ್ಕೂ ಅಧಿಕ ಪ್ರಶಸ್ತಿಗಳನ್ನು ಜಯಿಸುವುದದರ ಮೂಲಕ ಯೋಗಾಸನದಲ್ಲಿ ವಿಶಿಷ್ಟವಾದ ಸಾಧನೆ ಮಾಡುತ್ತಿದ್ದಾರೆ. ನಟ ದರ್ಶನ ಜತೆ ಕ್ರಾಂತಿ ಸಿನಿಮಾದಲ್ಲಿ ನಟನೆ ಮಾಡುವುದರ ಮುಖೇನ ಚಿತ್ರರಂಗದಲ್ಲಿಯೂ ಗುರುತಿಸಿ ಕೊಂಡಿದ್ದಾರೆ.ರಿಯಾಲಿಟಿ ಶೋ,ಭರತ ನಾಟ್ಯ,ಜಾಹೀರಾತು ವಿಭಾಗದಲ್ಲಿಯೂ ವಿಶೇಷ ರೀತಿಯ ಚಾಪನ್ನು ಮೂಡಿಸಿದ್ದಾರೆ.10 ನೇ ವಯಸ್ಸಿನಲ್ಲಿ ಯೋಗಾಭ್ಯಾಸದಲ್ಲಿ ಗುರುತಿಸಿಕೊಂಡಿರುವ ಬಹುಮುಖ ಪ್ರತಿಭೆಯನ್ನು […]

You cannot copy content of this page