ಮಂಡಾಡಿ ಹೋರ್ವರಮನೆಯ ಸಾಂಪ್ರದಾಯಿಕ ಕಂಬಳ ಮಹೋತ್ಸವ ಸಂಪನ್ನ
ಕುಂದಾಪುರ:ಮಂಡಾಡಿ ಹೋರ್ವರಮನೆ ಕುಟುಂಬದವರ ನಡೆಸಿಕೊಂಡು ಬರುತ್ತಿರುವ ಇತಿಹಾಸ ಪ್ರಸಿದ್ಧ ಸಾಂಪ್ರದಾಯಿಕ ಮಂಡಾಡಿ ಕಂಬಳ ಮಹೋತ್ಸವ ಕಾರ್ಯಕ್ರಮ ಸಡಗರ ಸಂಭ್ರಮದಿಂದ ಶುಕ್ರವಾರ ನಡೆಯಿತು.ಕಂಬಳದ ದಿನ ಬೆಳಿಗ್ಗೆ ಕಂಬಳ ಗದ್ದೆಯ ಅಲಂಕಾರವನ್ನು ಮಾಡಲಾಗುತ್ತದೆ,ಧೂಮಾವತಿ ದೈವ,ದೇವರ ಪೂಜೆ ಕಾರ್ಯಾದಿಗಳು ನೆರವೇರಿದ ಬಳಿಕ ಮಧ್ಯಾಹ್ನ ಕಂಬಳಕ್ಕೆ ಬರುವ ಕೋಣಗಳನ್ನು ವೀಳ್ಯ, ತೆಂಗಿನಕಾಯಿ ನೀಡಿ ಬರಮಾಡಿಕೊಳ್ಳಲಾಗುತ್ತದೆ ವಿಶಾಲವಾದ ಈ ಕಂಬಳ ಗದ್ದೆಯನ್ನು ತಳಿ ತೋರಣಗಳಿಂದ ಅಲಂಕಾರಿಸಲಾಗುತ್ತದೆ.ಮಂಡಾಡಿ ಹೋರ್ವರಮನೆ ಕುಟುಂಬದವರ ಕೋಣಗಳನ್ನು ಗದ್ದೆಗೆ ಇಳಿಸುವ ಮೂಲಕ ಕಂಬಳಕ್ಕೆ ಹಸಿರು ನಿಶಾನೆ ನೀಡಲಾಗುತ್ತದೆ.ಚಂಡೆ ವಾದ್ಯಗೋಷ್ಠಿಯೊಂದಿಗೆ ಮನೆ ಸದಸ್ಯರು […]