ಬೃಹತ್ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ
ಕುಂದಾಪುರ:ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು,ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಮತ್ತು ಆದರ್ಶ ಆಸ್ಪತ್ರೆ ಉಡುಪಿ ಅವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಸರಕಾರಿ ಹಿರಿಯ ಪ್ರಾಥಮಿಕ ನಾವುಂದ ಶಾಲೆಯಲ್ಲಿ ಭಾನುವಾರ ನಡೆಯಿತು.ಸವಿರಾರು ಜನರು ಆರೋಗ್ಯ ತಪಾಸಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ವೈದ್ಯಕೀಯ ತಪಾಸಣೆಯನ್ನು ಮಾಡಿಸಿಕೊಂಡರು.25ಕ್ಕೂ ಅಧಿಕ ನುರಿತ ವೈದ್ಯರು ಆರೋಗ್ಯ ತಪಾಸಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಸಹಾಯಕ ಕಮಿಷನರ್ ರಶ್ಮೀ ಎಸ್.ಆರ್ ವೈದ್ಯಕೀಯ ತಪಾಸಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ನಮ್ಮ ಜೀವನ ಶೈಲಿಯಲ್ಲಿ […]