ಗುಜ್ಜಾಡಿ:ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆ ಶಿಬಿರ ವಿರೋಧಿಸಿ ದಿಢೀರ್ ಪ್ರತಿಭಟನೆ
ಕುಂದಾಪುರ:ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಿನ ನೆಪದಲ್ಲಿ ಕಾರ್ಮಿಕ ಇಲಾಖೆವೂ ಕಾರ್ಮಿಕರ ಕಲ್ಯಾಣ ನಿಧಿಯಿಂದ 600 ಕೋಟಿ ಹಣವನ್ನು ಬಿಡುಗಡೆ ಮಾಡಿಕೊಂಡು ಖಾಸಗಿ ಆಸ್ಪತ್ರೆಗಳೊಂದಿಗೆ ಆರೋಗ್ಯ ಶಿಬಿರಗಳನ್ನು ಆಯೋಜನೆ ಮಾಡಲು ಒಡಂಬಡಿಕೆ ಮಾಡಿಕೊಂಡಿದೆ.ಕಟ್ಟಡ ಕಾರ್ಮಿಕರಿಗೆ ಪ್ರಯೋಜನೆ ಆಗದಿರುವಂತಹ ಆರೋಗ್ಯ ಶಿಬಿರಗಳನ್ನು ಆಯೋಜನೆ ಮಾಡಿ ಹಣ ದುರ್ಬಳಕೆ ಮಾಡುತ್ತಿದೆ ಎಂದು ಕುಂದಾಪುರ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘದ ಅಧ್ಯಕ್ಷ ಸುರೇಶ ಕಲ್ಲೇಗಾರ ಆರೋಪಿಸಿದರು.ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದಲ್ಲಿ ಮಂಗಳವಾರ ನಡೆದ ಕರ್ನಾಟಕ ಸರಕಾರ,ಕಾರ್ಮಿಕ ಇಲಾಖೆ […]