ಹೆಮ್ಮಾಡಿ ಶಾಲೆ ವಾರ್ಷಿಕೋತ್ಸವ ಕಾರ್ಯಕ್ರಮ
ಕುಂದಾಪುರ:ಹಳ್ಳಿ ಜನರು ಶಿಕ್ಷಣಕ್ಕೆ ಒತ್ತು ನೀಡಿದ್ದರಿಂದಲೇ ದೇಶ ಅಭಿವೃದ್ದಿ ಪಥದತ್ತ ಸಾಗಲು ಸಹಕಾರಿ ಆಗಿದೆ.ಶಿಕ್ಷಣದಿಂದ ಬಡತನವನ್ನು ಹೊಗಲಾಡಿಸ ಬಹುದೆಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.ಕುಂದಾಪುರ ತಾಲೂಕಿನ ಬೈಂದೂರು ವಲಯದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಹೆಮ್ಮಾಡಿ ಶಾಲೆಯಲ್ಲಿ ಗುರುವಾರ ನಡೆದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿ,ವಿದ್ಯಾಭ್ಯಾಸದ ಜತೆಗೆ ಮಕ್ಕಳಿಗೆ ಸಂಸ್ಕಾರಯುತವಾದ ಶಿಕ್ಷಣವನ್ನು ನೀಡುವಲ್ಲಿ ಪೋಷಕರು ಹೆಚ್ಚಿನ ಗಮನವನ್ನು ಹರಿಸಬೇಕಾಗಿದೆ.ಮಕ್ಕಳ ಭವಿಷ್ಯವನ್ನು ನಿರೂಪಿಸುವಲ್ಲಿ ಶಿಕ್ಷಕರ ಪಾತ್ರದ […]