ಕೃಷಿ -ತೋಟಗಾರಿಕೆ,ಅರಣ್ಯ ಕಾನೂನು ಮಾಹಿತಿ ಶಿಬಿರ ಉದ್ಘಾಟನೆ
ಕುಂದಾಪುರ:ಕುಂದಬಾರಂದಾಡಿ ತೆಂಗು ಉತ್ಪಾದಕರ ಸೌಹಾರ್ದ ಸೊಸೈಟಿ,ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಅವರ ಸಂಯುಕ್ತ ಆಶ್ರಯದಲ್ಲಿ ಕೃಷಿ ತೋಟಗಾರಿಕೆ ಮಾಹಿತಿ ಶಿಬಿರ ಹಾಗೂ ಅರಣ್ಯ ಕಾನೂನು ಮಾಹಿತಿ ಕಾರ್ಯಕ್ರಮ ಕುಂದಬಾರಂದಾಡಿ ಮೂಡಾರೆ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ಶನಿವಾರ ನಡೆಯಿತು. ಉಡುಪಿ ಜಿಲ್ಲೆಯ ಭಾರತೀಯ ಕಿಸಾನ್ ಸಂಘದ ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಉಡುಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಗ್ರಾಮೀಣ ಭಾಗದಲ್ಲಿ ನಡೆಯುವ ಇಂತಹ ಕಾರ್ಯಕ್ರಮಗಳು ರೈತರಿಗೆ ಬಹಳಷ್ಟು ಉಪಯೋಗವಾಗಲಿದೆ.ರೈತರು ಒಂದೇ ಬೆಳೆಗೆ ಮಾರು ಹೋಗದೆ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು […]