ಹಕ್ಲಾಡಿ ಶಾಲೆಗೆ,ಧನಸಹಾಯ ವಿತರಣೆ

ಕುಂದಾಪುರ:ತಾಲೂಕಿನ ಬೈಂದೂರು ವಲಯದ ಮಾದರಿ ಸರಕಾರಿ ಹಿರಿಯ ಪ್ರಾಥಮಿಕ ಹಕ್ಲಾಡಿ ಶಾಲೆಯ ಅಭಿವೃದ್ಧಿಗೆ ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ವತಿಯಿಂದ 75,000.ರೂ ಧನಸಹಾಯವನ್ನು ಕ್ಲಬ್ಬಿನ ಅಧ್ಯಕ್ಷ ಗಣಪಯ್ಯ ಶೆಟ್ಟಿ ಹಾಗೂ ಪದಾಧಿಕಾರಿಗಳು ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಮತ್ತು ಶಾಲೆಯ ಮುಖ್ಯೋಪಾಧ್ಯಾಯರಿಗೆ ಚೆಕ್ ರೂಪದಲ್ಲಿ ಬುಧವಾರ ನಡೆದ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಸ್ತಾಂತರ ಮಾಡಿದರು.ಈ ಸಂದರ್ಭ ಅತಿಥಿಗಳು ಉಪಸ್ಥಿತರಿದ್ದರು.

ಹೆಮ್ಮಾಡಿ:ಅಪಘಾತ,ಬಸ್ ಡ್ರೈವರ್ ಸಾವು

ಕುಂದಾಪುರ:ತಾಲೂಕಿನ ಹೆಮ್ಮಾಡಿ ಹಾಲು ಡೈರಿ ಬಳಿ ಸಂಭವಿಸಿದ ಕಾರು ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಜಯದುರ್ಗಾ ಬಸ್ ಡ್ರೈವರ್ ಮಾಬಲ ತೋಪ್ಲು ಅವರು ಸಾವನ್ನಪ್ಪಿದ್ದ ಘಟನೆ ಗುರುವಾರ ನಡೆದಿದೆ. ಎಂದಿನಂತೆ ಬಸ್ ಡ್ರೈವರ್ ಕೆಲಸವನ್ನು ನಿರ್ವಹಿಸಿ ಬಸ್ ನ್ನು ನೂಜಾಡಿ ಸ್ಟಾಪ್ ನಲ್ಲಿ ನಿಲ್ಲಿಸಿ ಬೈಕ್ ನಿಂದ ಹೆಮ್ಮಾಡಿ ಯಿಂದ ತೋಪ್ಲುಗೆ ತೆರಳುತ್ತಿದ್ದ ಸಂದರ್ಭ ಹೆಮ್ಮಾಡಿ ಹಾಲು ಡೈರಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂಟರ್ನ್ ತೆಗೆದು ಕೊಳ್ಳುತ್ತಿದ್ದ ಸಮಯದಲ್ಲಿ ಮುಳ್ಳಿಕಟ್ಟೆ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಕಾರ್ […]

ಮಾದರಿ ಸರಕಾರಿ ಹಿರಿಯ ಪ್ರಾಥಮಿಕ ಹಕ್ಲಾಡಿ ಶಾಲೆ 121ನೇ ವಾರ್ಷಿಕೋತ್ಸವ ಕಾರ್ಯಕ್ರಮ

(ಹಕ್ಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರೇಮಾ ದೇವಾಡಿಗ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು) ಕುಂದಾಪುರ:ಬೈಂದೂರು ವಲಯದ ಮಾದರಿ ಸರಕಾರಿ ಹಿರಿಯ ಪ್ರಾಥಮಿಕ ಹಕ್ಲಾಡಿ ಶಾಲೆಯಲ್ಲಿ 121ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಬುಧವಾರ ಅದ್ದೂರಿಯಾಗಿ ನಡೆಯಿತು.ಸಾಂಸ್ಕ್ರತಿಕ ವೈಭವ ಕಾರ್ಯಕ್ರಮದ ಅಂಗವಾಗಿ ಅಂಗನವಾಡಿ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮ,ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ಸಿಂಚನ ಕಾರ್ಯಕ್ರಮ ಹಾಗೂ ಚೆಲುವೆ ಚಿತ್ರ ನಯನೆ ಎಂಬ ಯಕ್ಷಗಾನ ಪ್ರದರ್ಶನ ಜರುಗಿತು.ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಹಳೆ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ […]

You cannot copy content of this page